ಶಿವಮೊಗ್ಗ: ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಸ್ಫೋಟ -Vishwanews24
ಶಿವಮೊಗ್ಗ: ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಸ್ಫೋಟ : 10 ಕಾರ್ಮಿಕರ ಸಾವು
ಶಿವಮೊಗ್ಗ: ಅಬ್ಬಲಗೆರೆ-ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಗುರುವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ ಸುಮಾರು 10 ಕಾರ್ಮಿಕರು ಮೃತಪಟ್ಟಿದ್ದಾರೆ.
ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್ ಬಾಕ್ಸ್‌ಗಳು ಸ್ಫೋಟಗೊಂಡು ಅನಾಹುತ ಸಂಭವಿಸಿದೆ. ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ಸ್ಥಳದಲ್ಲಿದ್ದ ಯಾರೊಬ್ಬರು ಬದುಕುಳಿದಿರುವ ಸಾಧ್ಯತೆ ಇಲ್ಲ ಎಂದು ಸ್ಥಳೀಯರಾದ ನಾಗರಾಜಪ್ಪ ತಿಳಿಸಿದರು.
ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ಸ್ಥಳದಲ್ಲಿದ್ದ ಯಾರೂಬ್ಬರು ಬದುಕುಳಿದಿರುವ ಸಾಧ್ಯತೆ ಇಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಭೂಮಿ ಕಂಪಿಸಿದ ಅನುಭವವಾದ ಸಮಯದಲ್ಲೇ ಈ ಘಟನೆ ನಡೆದಿದೆ. ಡೈನಾಮೆಟ್ ಸ್ಫೋಟದಿಂದಲೇ ಭೂಕಂಪನದ ಅನುಭವಾಗಿದೆ ಎಂದು ಹಲವು ಜನ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.
