ಶಿವಮೊಗ್ಗ ಡೈನಾಮೈಟ್ ಸ್ಪೋಟ : ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬಿಎಸ್ ವೈ -Vishwanews24
ಶಿವಮೊಗ್ಗ ಡೈನಾಮೈಟ್ ಸ್ಪೋಟ : ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬಿಎಸ್ ವೈ -Vishwanews24
ಬೆಂಗಳೂರು: ಶಿವಮೊಗ್ಗದ ಹುಣಸೋಡು – ಅಬ್ಬಲಗೆರೆ ಬಳಿ ಇರುವ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಸಂಭವಿಸಿದ ಭೀಕರ ಸ್ಫೋಟ ಪ್ರಕರಣ ಕುರಿತು ಅಧಿಕಾರಿಗಳಿಂದ ಮಾಹಿತಿ ತರಿಸಿಕೊಂಡಿದ್ದೇನೆ. ಘಟನೆಗೆ ಕಾರಣ ಕುರಿತು ತನಿಖೆ ನಡೆಸಲು ಆದೇಶಿಸಲಾಗಿದೆ, ನಾಳೆ ನಾನೇ ಶಿವಮೊಗ್ಗಕ್ಕೆ ಘಟನೆ ನಡೆದ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದರು.
ಶಿವಮೊಗ್ಗದಲ್ಲಿ ಆದ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲು ತಜ್ಞರ ತಂಡ ಆಗಮಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಗಣಿ ಮತ್ತು ಭೂ ವಿಜ್ಞಾನ ಸಚಿವರು, ಸಂಸದ ಬಿ ವೈ ರಾಘವೇಂದ್ರ ಅವರು ಸ್ಥಳಕ್ಕೆ ತೆರಳಿ ಸಮಗ್ರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಕೂಡ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದೆ. ತನಿಖೆಯ ವರದಿ ಬಂದ ಮೇಲೆ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗೆ ಆಗ್ರಹ.vishwanews24 –
