ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಹೆಚ್ಡಿ ದೇವೇಗೌಡ ದಂಪತಿ – Vishwanews24
ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಹೆಚ್ಡಿ ದೇವೇಗೌಡ ದಂಪತಿ
ಮಂಗಳೂರು: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ದಂಪತಿ ಇಂದು ಮುಂಜಾನೆ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಹೆಚ್.ಡಿ. ದೇವೇಗೌಡ ಹಾಗೂ ಪತ್ನಿ ಚನ್ನಮ್ಮ ನಾಗಪ್ರತಿಷ್ಠೆ, ತುಲಾಭಾರ, ಮಹಾಪೂಜೆಯನ್ನು ಅವರು ಕ್ಷೇತ್ರದಲ್ಲಿ ನೆರವೇರಿಸಲಿದ್ದು, ಬೆಳಿಗ್ಗೆ 6:30ಗೆ ಆಶ್ಲೇಷ ಪೂಜೆ ನೆರವೇರಿಸಿದ ಎಚ್.ಡಿ.ದೇವೇಗೌಡ ದಂಪತಿ, ಬಳಿಕ ಸಂಪುಟ ನರಸಿಂಹ ದೇವರ ದರ್ಶನ ಪಡೆದರು.
ಹೆಚ್ಡಿಡಿ ದಂಪತಿ ಭಾನುವಾರ ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಬೇಕಿತ್ತು. ಆದರೆ ಮೋಡ ಕವಿದ ವಾತಾವರಣವಿದ್ದ ಹಿನ್ನೆಲೆ ಹೆಲಿಕಾಪ್ಟರ್ ಟೇಕ್ ಆಫ್ ಆಗಲಿಲ್ಲ. ಬಳಿಕ ದಂಪತಿ ವಿಮಾನದ ಮೂಲಕ ಮಂಗಳೂರಿಗೆ ಬಂದು ತಡರಾತ್ರಿ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ.
