ಸಂಡೂರು ಉಪಚುನಾವಣೆ : ಕಾಂಗ್ರೆಸ್ನ ಅನ್ನಪೂರ್ಣಗೆ ಗೆಲುವು – vishwanews24
ಸಂಡೂರು ಉಪಚುನಾವಣೆ : ಕಾಂಗ್ರೆಸ್ನ ಅನ್ನಪೂರ್ಣಗೆ ಗೆಲುವು
ಬೆಂಗಳೂರು : ಉಪ ಚುನಾವಣೆ ನಡೆದ ರಾಜ್ಯದ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಈ ಪೈಕಿ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಕುರಿತು ಚುನಾವಣಾ ಆಯೋಗದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಕಾಂಗ್ರೆಸ್ನ ಅನ್ನಪೂರ್ಣ ತುಕಾರಾಂ ಗೆಲುವು ದಾಖಲಿಸಿದ್ದಾರೆ. ಆ ಮೂಲಕ ಸಂಡೂರು ಕ್ಷೇತ್ರವನ್ನು ಕಾಂಗ್ರೆಸ್ ಮತ್ತೆ ತನ್ನ ವಶಕ್ಕೆ ತೆಗೆದುಕೊಂಡಿದೆ.
