ಸಂಸದ ಬಿ. ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು – Vishwanews24
ಸಂಸದ ಬಿ. ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು
ರಾಮನಗರ: ಸಂಸದ ಬಿ. ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದ್ದು, ಸಂಸದರು ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಂಸದರು, ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳುತ್ತಿದ್ದ ಸ್ನೇಹಜೀವಿ ಹಾಗೂ ನನ್ನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಭಟ್ ಅವರ ಅಕಾಲಿಕ ನಿಧನದ ಸುದ್ದಿಯಿಂದ ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳುತ್ತಿದ್ದ ಸ್ನೇಹಜೀವಿ ಹಾಗೂ ನನ್ನ ಫೋಟೋಗ್ರಾಫರ್ ಆಗಿದ್ದ ಶ್ರೀ ಪ್ರಸನ್ನ ಭಟ್ ಅವರ ಅಕಾಲಿಕ ನಿಧನದ ಸುದ್ದಿಯಿಂದ ದುಃಖಿತನಾಗಿದ್ದೇನೆ.
ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. pic.twitter.com/IUiisohpxQ
— B Y Raghavendra (@BYRBJP) January 2, 2023
ಇವರು ಶಿವಮೊಗ್ಗ ಜಿಲ್ಲೆ ಹೊಸನಗರ ನಿವಾಸಿಯಾಗಿರುವ ಪ್ರಸನ್ನ ಭಟ್ (25) ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಸಂಜೆ ಈಜಲು ಹೋಗಿದ್ದ ಸಂದರ್ಭದಲ್ಲಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರಸನ್ನ ಭಟ್ ಆರು ಜನರ ತಂಡ ಕನಕಪುರದ ಸ್ನೇಹಿತನ ಮನೆಗೆ ಬಂದಿದ್ದರು. ಅಂತೆಯೇ ಸಂಜೆ ಈಜಾಡಲು ಎಂದು ಮಾವತ್ತೂರು ಕೆರೆ ತೆರಳಿದ್ದರು. ಈಜಾಡುವ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ರಿಷಭ್ ಪಂತ್ ಆರೋಗ್ಯದಲ್ಲಿ ಸುಧಾರಣೆ: ಐಸಿಯುನಿಂದ ಖಾಸಗಿ ವಾರ್ಡ್ಗೆ ಶಿಫ್ಟ್ – Vishwanews24
ಇನ್ ಸ್ಟಾಗ್ರಾಂನಲ್ಲಿ ಮಾವತ್ತೂರು ಕೆರೆಯ ವಿಡಿಯೋ ನೋಡಿದ್ದರು. ಹಾಗಾಗಿ ಅಲ್ಲಿಗೆ ತೆರಳಿದ್ದರು ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಪ್ರಸನ್ನ ಭಟ್ ಅವರಿಗಾಗಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ರಾತ್ರಿ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ದಯಾನಂದ ಸಾಗರ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.
ಫೋಟೋಗ್ರಫಿ, ವಿಡಿಯೋಗ್ರಫಿಯಲ್ಲಿ ನಿಪುಣರಾಗಿದ್ದರು. ಕೆಲ ವರ್ಷದಿಂದ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೊ ಗ್ರಾಫರ್ ಆಗಿ ಕಾರ್ಯ ನಿರ್ಹಿಸುತ್ತಿದ್ದರು. ಸಂಸದ ರಾಘವೇಂದ್ರ ಅವರ ಸಾಮಾಜಿಕ ಜಾಲತಾಣಗಳು, ಮೀಡಿಯಾ ವಿಭಾಗವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿದ್ದರು. ಇದೆ ಕಾರಣಕ್ಕೆ ಅವರು ಸಂಸದ ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದವರಿಗೆ ಆಪ್ತರಾಗಿದ್ದರು.
ಕೂಡಲೇ ವಿಷಯ ತಿಳಿದು ಕನಕಪುರ ಗಾಮಾಂತರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ದಯಾನಂದ ಸಾಗರ್ ಆಸ್ಪತ್ರೆಗೆ ರವಾನಿಸಲಗಿತ್ತು. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೆಕ್ಸಿಕೊ : ಜೈಲಿನ ಮೇಲೆ ದಾಳಿ – 14 ಮಂದಿ ದಾರುಣ ಸಾವು, 24 ಖೈದಿಗಳು ಪರಾರಿ – Vishwanews24
