ಸಂಸದೆ ಕಂಗನಾ ರಣಾವತ್ ಗೆ ಕಪಾಳ ಮೋಕ್ಷ ಮಾಡಿದ್ದ ಮಹಿಳಾ ಭದ್ರತಾ ಸಿಬ್ಬಂದಿ ಸೇವೆಯಿಂದ ಅಮಾನತು – vishwanews24
ಸಂಸದೆ ಕಂಗನಾ ರಣಾವತ್ ಗೆ ಕಪಾಳ ಮೋಕ್ಷ ಮಾಡಿದ್ದ ಮಹಿಳಾ ಭದ್ರತಾ ಸಿಬ್ಬಂದಿ ಸೇವೆಯಿಂದ ಅಮಾನತು
ಚಂಡೀಗಢ: ಚಂಡೀಗಢ್ ವಿಮಾನ ನಿಲ್ದಾಣದಲ್ಲಿ ನಟಿ, ಸಂಸದೆ ಕಂಗನಾ ರಣಾವತ್ ಗೆ ಕಪಾಳ ಮೋಕ್ಷ ಮಾಡಿದ್ದ ಮಹಿಳಾ ಭದ್ರತಾ ಸಿಬಂದಿ ಕುಲ್ವಿಂದರ್ ಕೌರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ರೈತರು 2020ರಲ್ಲಿ ಪ್ರತಿಭಟನೆ ನಡೆಸಿದ್ದ ಸಂದರ್ಭದಲ್ಲಿ ಕಂಗನಾ ರಣಾವತ್ , ನೂರು ರೂಪಾಯಿಗಾಗಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಪ್ರತಿಭಟನೆಯಲ್ಲಿ ನನ್ನ ತಾಯಿಯೂ ಭಾಗಿಯಾಗಿದ್ದಳು. ಅದಕ್ಕೆ ಈ ಹೇಳಿಕೆಗೆ ಪ್ರತೀಕಾರವಾಗಿ ಕುಲ್ವಿಂದರ್ ಕೌರ್ ಕಂಗಾನಾಗೆ ಕಪಾಳಮೋಕ್ಷ ಮಾಡಿರುವುದಾಗಿ ತಿಳಿಸಿದ್ದರು.
ಜೂನ್ 9ಕ್ಕೆ 3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ – vishwanews24
ಹಿಮಾಚಲ್ ಪ್ರದೇಶದ ಮಾಂಡಿ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸಿದ್ದ ಕಂಗನಾ ರಣಾವತ್ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು.
ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಆರೋಪಿ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹರ್ಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ತಿಳಿಸಿದ್ದಾರೆ.
