ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

Featured, ರಾಜ್ಯ ನ್ಯೂಸ್

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ

ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ ನಿನ್ನೆ (ಅ.6) ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಸ್ಫೋಟಕ ಮಾಹಿತಿಯೊಂದರ ಬಗ್ಗೆ ಭಾರೀ ಚರ್ಚೆಯಾಗಿದೆ.

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್​​ ನಡೆಯುತ್ತಿದ್ದು, ಎಲ್ಲರೂ ಎಚ್ಚರದಲ್ಲಿರುವಂತೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಸಚಿವರು ಎಚ್ಚರಿಕೆಯಿಂದ ಕೆಲಸ ಮಾಡಬೇಕಿದ್ದು, ನಿಮ್ಮ ಇಲಾಖೆಗಳಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ವೇಳೆಯೂ ಸೂಕ್ಷ್ಮತೆಯನ್ನು ಕಾಪಾಡಿಕೊಳ್ಳಬೇಕು. ಆಸೆ, ಆಮಿಷಗಳಿಗೆ ಬಲಿಯಾಗಿ ಯಾವುದೇ ವಿಚಾರವನ್ನು ಬಹಿರಂಗಪಡಿಸುವ ಹಂತಕ್ಕೆ ನೀವು ಹೋಗಲೇ ಬಾರದು ಎಂದು ಸಿಎಂ ಡಿಕೆಶಿ ತಿಳಿಸಿದ್ದಾರೆ.

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಅಲ್ಲದೆ ಈಗಾಗಲೇ ಸ್ಟಿಂಗ್​​ ಆಪರೇಷನ್​​ಗೆ ಒಳಗಾಗಿದ್ದಾರೆ ಎಂಬ ಅನುಮಾನವಿರುವ ಸಚಿವರುಗಳ ಹೆಸರನ್ನೂ ಅವರು ಬಹಿರಂಗಪಡಿಸಿದ್ದಾರೆ. ಹೀಗಾಗಿ ಈ ಸ್ಟಿಂಗ್ ಆಪರೇಷನ್​​ ವಿಚಾರವೀಗ ಹಲವು ಮಂತ್ರಿಗಳ ಆತಂಕಕ್ಕೂ ಕಾರಣವಾಗಿದೆ. ಸಿಎಂ ಅವರೇ ಖುದ್ದಾಗಿ ಈ ಮಾಹಿತಿ ನೀಡಿರುವ ಕಾರಣ ವಿಚಾರ ಮಹತ್ವ ಪಡೆದುಕೊಂಡಿದೆ

Leave a Reply