ಸತೀಶ್ ಜಾರಕಿಹೊಳಿ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ : ಡಿಕೆಶಿ – Vishwanews24
ಸತೀಶ್ ಜಾರಕಿಹೊಳಿ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ..
ಅವರ ಹೇಳಿಕೆಯಿಂದ ಪಕ್ಷಕ್ಕೆ ಯಾವುದೇ ಹಾನಿಯಾಗುವುದಿಲ್ಲ..
ಅವರ ಹೇಳಿಕೆಯನ್ನು ನಾವು ಒಪ್ಪಲ್ಲ, ಅದನ್ನು ಖಂಡಿಸುತ್ತೇವೆ..
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಹುಬ್ಬಳ್ಳಿ: ಹಿಂದೂ ಪದ ಕುರಿತು ಸತೀಶ್ ಜಾರಕಿಹೊಳಿ ಯಾವ ಪದಕೋಶದಲ್ಲಿ ನೋಡಿ ಹೇಳಿದ್ದಾರೆ ಗೊತ್ತಿಲ್ಲ. ಆದರೆ ಅವರ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಾರಕಿಹೋಳಿ ಹೇಳಿಕೆಯ ಬಗ್ಗೆ ಶಿಸ್ತು ಕ್ರಮದ ಕುರಿತು ಮುಂದೆ ಆಲೋಚನೆ ಮಾಡುತ್ತೇವೆ. ಆದರೆ ಸತೀಶ್ ಜಾರಕಿಹೊಳಿ ಹೇಳಿಕೆಯಿಂದ ಪಕ್ಷಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎಂದರು.
ಇನ್ನು ನಾನೂ ಸಹ ಒಬ್ಬ ಹಿಂದೂ. ಸರ್ವ ಜನಾಂಗ ಸರ್ವ ಧರ್ಮಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವುದು ಕಾಂಗ್ರೆಸ್ ಸಿದ್ಧಾಂತ. ಸತೀಶ್ ಜಾರಕಿಹೊಳಿ ಈ ರೀತಿ ಹೇಳಿರುವುದು ಸರಿಯಲ್ಲ. ಅವರ ಹೇಳಿಕೆಯನ್ನು ನಾವು ಒಪ್ಪಲ್ಲ, ಅದನ್ನು ಖಂಡಿಸುತ್ತೇವೆ ಎಂದಿದ್ದಾರೆ.
ಹಿಮಾಚಲ ಪ್ರದೇಶ: ಕಾಂಗ್ರೆಸ್‌ನ 26 ಮಂದಿ ಮುಖಂಡರು ಬಿಜೆಪಿ ಸೇರ್ಪಡೆ – Vishwanews24
