ಸತೀಶ್ ಜಾರಕಿಹೊಳಿಗೆ ಇಡಿ ದಾಳಿ ರಾಜಕೀಯ ಪ್ರೇರಿತ ; ಅವರು ಯಾವುದೇ ತಪ್ಪು ಮಾಡಿಲ್ಲ : ಸಿಎಂ ಡಿಕೆಶಿ – vishwanews24
ಸತೀಶ್ ಜಾರಕಿಹೊಳಿ ಅವರ ಬೆಳವಣಿಗೆ ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ..
ನಮ್ಮ ಕುಟುಂಬಸ್ಥರು ವಿದೇಶದಲ್ಲಿ ಬಿಸಿನೆಸ್ ಮಾಡುವುದು ತಪ್ಪಾ?..
ಅವರ ಜೊತೆ ಪಕ್ಷ ಮತ್ತು ಸರ್ಕಾರ ಶೇಕಡಾ ನೂರರಷ್ಟು ಗಟ್ಟಿಯಾಗಿ ನಿಲ್ಲಲಿದೆ : ಸಿಎಂ ಡಿಕೆ ಶಿ
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸತೀಶ್ ಜಾರಕಿಹೊಳಿ ಪ್ರಭಾವಿ ದಲಿತ ನಾಯಕ. ಅವರ ಬೆಳವಣಿಗೆಯನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಈ ಹಿಂದೆ ನನ್ನ ಮೇಲೂ ದಾಳಿ ನಡೆಸಿ ಜೈಲಿಗೆ ಹಾಕಿದ್ದರು. ಈಗ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:
ಬೆಂಗಳೂರು: ರೀಲ್ಸ್ ವಿಚಾರಕ್ಕೆ ಗಲಾಟೆ; ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ – vishwanews24
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ. ಅವರ ಜೊತೆ ಪಕ್ಷ ಮತ್ತು ಸರ್ಕಾರ ಶೇಕಡಾ ನೂರರಷ್ಟು ಗಟ್ಟಿಯಾಗಿ ನಿಲ್ಲಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬೇರೆ ದೇಶದಲ್ಲಿ ವ್ಯಾಪಾರ-ವಹಿವಾಟು ಮಾಡಬಾರದಾ? ಅದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ವಾ? ನಮ್ಮ ಕುಟುಂಬಸ್ಥರು ವಿದೇಶದಲ್ಲಿ ಬಿಸಿನೆಸ್ ಮಾಡುವುದು ತಪ್ಪಾ? ಸತೀಶ್ ಜಾರಕಿಹೊಳಿ ಒಬ್ಬ ಹಿರಿಯ ಮಂತ್ರಿ ಹಾಗೂ ಉದ್ಯಮಿ. ಯಾವುದೇ ಮುಚ್ಚುಮರೆ ಇಲ್ಲದೆ ಸಮಾಜಸೇವೆ ಮಾಡುತ್ತಿದ್ದಾರೆ. ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದಾರೆ, ಯಾರೂ ಗಾಬರಿಯಾಗಬೇಕಿಲ್ಲ ಎಂದರು.
ಇದನ್ನೂ ಓದಿ:
ಉಡುಪಿ: ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯ ; ಸೆಪ್ಟೆಂಬರ್ 30 ಕೊನೆಯ ದಿನ – vishwanews24
