ಸನ್ನಿ ಲಿಯೋನ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕಾರ್ಯಕರ್ತರ ಪ್ರತಿಭಟನೆ

Featured, ಸಿನಿಮಾ

ಬೆಂಗಳೂರು,: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವೀರ ಮಹಾದೇವಿ ಚಿತ್ರಕ್ಕೆ ವಿರೋಧಗಳು ವ್ಯಕ್ತವಾಗುತ್ತಿವೆ.

ವೀರ ಮಹಾದೇವಿ ಚಿತ್ರದಲ್ಲಿ ಸನ್ನಿ ಲಿಯೋನ್ ನಟಿಸಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕಾರ್ಯಕರ್ತರು ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.

ವೀರ ಮಹಾದೇವಿ ಐತಿಹಾಸಿಕ ಚಿತ್ರವಾಗಿದೆ. ಹೀಗಾಗಿ ಈ ಚಿತ್ರದಲ್ಲಿ ನೀಲಿ ತಾರೆ ಸನ್ನಿ ಲಿಯೋನ್ ನಟಿಸಬಾರದು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಸನ್ನಿಲಿಯೋನ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ವೀರ ಮಹಾದೇವಿ ಚಿತ್ರ ಪಂಚ ಭಾಷೆಗಳಲ್ಲಿ ತಯಾರಾಗುತ್ತಿದ್ದು, ಒಟ್ಟು 100 ಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಹಂತದಲ್ಲಿದ್ದು, ಸನ್ನಿ ಮುಖ್ಯ ಪ್ರಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.