ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಆರೆಸ್ಸೆಸ್ ವಿರುದ್ಧವೂ ಕ್ರಮ ಕೈಗೊಳ್ಳಬೇಕು: ಸಿದ್ದರಾಮಯ್ಯ ಆಗ್ರಹ – Vishwanews24

Featured, ರಾಜ್ಯ ನ್ಯೂಸ್

ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಆರೆಸ್ಸೆಸ್ ವಿರುದ್ಧವೂ ಕ್ರಮ ಕೈಗೊಳ್ಳಬೇಕು: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಮುಂದಿನ ಐದು ವರ್ಷಗಳ ಅವಧಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದ್ದು, ಈ ಕುರಿತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ಬುಧವಾರ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಯಾವುದೇ ಸಂಘಟನೆ ವಿರುದ್ಧ ಕ್ರಮ ಕೈಗೊಂಡರೆ ನಮ್ಮದೇನು ವಿರೋಧ ಇಲ್ಲ.

ಅದೇ ರೀತಿ ಆರೆಸ್ಸೆಸ್ ಸಂಘಟನೆ ಕೂಡ ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದು, ಆ ಸಂಘಟನೆ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದರು.

‘ಸಮಾಜದಲ್ಲಿ ಶಾಂತಿ ಹಾಳು ಮಾಡುವ ಯಾವುದೇ ಸಂಘಟನೆಯನ್ನು ನಿಷೇಧ ಮಾಡಬೇಕು. ಇದನ್ನೇ ಈ ಹಿಂದೆಯೂ ಹೇಳಿದ್ದೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ’ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದರು.

ಉಡುಪಿ: ಮಲ್ಪೆ ಪಡುಕೆರೆ ಸೇತುವೆ ಬಳಿ ನೀರಿಗೆ ಬಿದ್ದು ನಾಪತ್ತೆ : ಯುವಕ ದಾವಣಗೆರೆಯಲ್ಲಿ ಪತ್ತೆ..ಪತ್ನಿಯನ್ನು ಬಿಟ್ಟು ಅನ್ಯ ಯುವತಿಯೊಂದಿಗೆ ಸಂಸಾರ ನಡೆಸುವ ಉದ್ದೇಶದಿಂದ ನೀರಿನಲ್ಲಿ ಮುಳುಗಿ ನಾಪತ್ತೆ ನಾಟಕವಾಡಿದ್ದ ಯುವಕ..

Leave a Reply