ಸಮಾಧಿ ಸ್ಥಿತಿಯಲ್ಲಿ ನಿತ್ಯಾನಂದ ಸ್ವಾಮೀಜಿ ; 2026ರ ವೇಳೆಗೆ ಲೌಕಿಕ ಜಗತ್ತಿನ ಚಟುವಟಿಕೆಗಳಿಗೆ ಹಿಂತಿರುಗುತ್ತೇನೆ – Vishwanews24

Featured, ರಾಜ್ಯ ನ್ಯೂಸ್

ಸಮಾಧಿ ಸ್ಥಿತಿಯಲ್ಲಿ ನಿತ್ಯಾನಂದ ಸ್ವಾಮೀಜಿ ; 2026ರ ವೇಳೆಗೆ ಲೌಕಿಕ ಜಗತ್ತಿನ ಚಟುವಟಿಕೆಗಳಿಗೆ ಹಿಂತಿರುಗುತ್ತೇನೆ – Vishwanews24

ರಾಮನಗರ : ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪ್ರವಚನಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಿದ್ದ ನಿತ್ಯಾನಂದ ಸ್ವಾಮಿಜಿ ಇದೀಗ ತಾವು ಸಮಾಧಿ ಸ್ಥಿತಿಯಲ್ಲಿರುವುದಾಗಿ ಘೋಷಿಸಿ ಮತ್ತೆ ಸುದ್ದಿಗೆ ಬಂದಿದ್ದಾರೆ.

ಇತ್ತೀಚೆಗೆ ನಿತ್ಯಾನಂದ ಸ್ವಾಮಿಜಿ ಅವರ ಯಾವುದೇ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣದ ಹಿನ್ನಲೆ ನಿತ್ಯಾನಂದ ಸ್ವಾಮಿಜಿ ಸಾವನಪ್ಪಿದ್ದಾರೆ ಎಂದು ಸುದ್ದಿ ಹರಡಿಸಿದ್ದಾರೆ. ಆದರೆ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿರುವ ನಿತ್ಯಾನಂದ ಸ್ವಾಮಿಜಿ ಕೈಲಾಸ ಪೀಠ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ಈ ಸಂಬಂಧ ಪೋಸ್ಟ್ ಹಾಕಲಾಗಿದ್ದು, ಅಲ್ಲಿ ನಿತ್ಯಾನಂದರ ಸಂದೇಶಗಳನ್ನು ಬರೆಯಲಾಗಿದೆ. ನಿತ್ಯಾನಂದ ಕೈ ಬರಹ ಇರುವ ಫೋಟೊ ಸಹ ಇದೆ. ‘ನಾನು ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ಮತ್ತೆ 2026ರ ವೇಳೆಗೆ ಲೌಕಿಕ ಜಗತ್ತಿನ ಚಟುವಟಿಕೆಗಳಿಗೆ ಹಿಂತಿರುಗುತ್ತೇನೆ’ ಎಂದು ಅದರಲ್ಲಿ ಬರೆಯಲಾಗಿದೆ.

ನಾನು ಈಗಾಗಲೇ ಸತ್ತು ಹೋಗಿದ್ದೇನೆ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ಅದೆಲ್ಲ ಸುಳ್ಳು. ಈಗಲೂ 27 ವೈದ್ಯರ ತಂಡ ನನ್ನನ್ನು ನೋಡಿಕೊಳ್ಳುತ್ತಿದೆ. ಸಮಾಧಿ ಸ್ಥಿತಿಯಲ್ಲಿದ್ದರೂ ನಿತ್ಯ ಶಿವ ಪೂಜೆ ಮಾಡುವುದನ್ನು ಬಿಟ್ಟಿಲ್ಲ. ಆದರೆ ನೀರು–ಆಹಾರ ಸ್ವೀಕರಿಸುತ್ತಿಲ್ಲ ಎಂದೂ ನಿತ್ಯಾನಂದ ಸ್ಪಷ್ಟನೆ ನೀಡಿದ್ದಾರೆ.

ವಂಚನೆ ಪ್ರಕರಣ : ನಾನು ಖಂಡಿತವಾಗಿಯೂ ಪಕ್ಷಕ್ಕೆ ೮ ಕೋಟಿ ರೂ.ಗಳನ್ನು ವಂಚಿಸಿಲ್ಲ : ಸಂಸದೆ ರಮ್ಯಾ – Vishwanews24  

Leave a Reply