ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದರೆ ದೇವೇಗೌಡರು ಪ್ರಧಾನಿ ಹುದ್ದೆ ಅಲಂಕರಿಸುವ ಅವಕಾಶವಿದೆ : ಹೆಚ್. ವಿಶ್ವನಾಥ್

Featured, ಜಿಲ್ಲೆ, ರಾಜ್ಯ ನ್ಯೂಸ್

ತುಮಕೂರು : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದರೆ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಪ್ರಧಾನಿ ಹುದ್ದೆ ಅಲಂಕರಿಸುವ ಅವಕಾಶವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಹೇಳಿದ್ದಾರೆ.

ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಿಂದ ಮುದ್ದಹನುಮೇಗೌಡರಿಗೆ ಟಿಕೆಟ್ ಕೈ ತಪ್ಪಿದ್ದರೂ ಮನಸ್ಸಿನಲ್ಲಿ ಇಟ್ಟುಕೊಳ್ಳದೇ ಹೆಚ್.ಡಿ.ದೇವೇಗೌಡರಿಗೆ ಸಹಕರಿಸುತ್ತಿದ್ದಾರೆ ಎಂದರು.

ಪ್ರಧಾನಿ ಮೋದಿ ಅವರು ಕರ್ನಾಟಕಕ್ಕೆ ಏನೂ ಕೊಡ್ಲಿಲ್ಲ. ಕೊಟ್ಟಿದ್ದನ್ನು ಕಿತ್ತುಕೊಂಡರು, ಸುಳ್ಳಿನ ಸರಮಾಲೆಯನ್ನೇ ಸೃಷ್ಟಿಸಿ ಚಪ್ಪಾಳೆ ಗಿಟ್ಟಿಸಿಕೊಂಡರು. ಈ ಚುನಾವಣೆ ನಕಲಿ ರಾಷ್ಟ್ರೀಯ ವಾದ, ಬಹುತ್ವವಾದದ ನಡುವಿನ ಸಂಘರ್ಷವಾಗಿದೆ. ಮೋದಿ ಅವರನ್ನು ಯಾರೂ ಟೀಕೆ ಮಾಡಿದವರನ್ನು ದೇಶದ್ರೋಹಿಗಳು, ಅವರನ್ನು ಹೊಗಳಿದರೆ ದೇಶಪ್ರೇಮಿಗಳು ಎಂದು ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದರು.