ಸಮ್ಮಿಶ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್ : 2.9 ಲಕ್ಷ ಸಾಲ ಖಾತೆಗಳಿಗೆ 1440 ಕೋಟಿ ರೂ. ಬಿಡುಗಡೆ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್ ಸಿಕ್ಕಿದ್ದು, ರೈತರ ಬೆಳೆಸಾಲ ಮನ್ನಾ ಯೋಜನೆಯಡಿ ಜನವರಿ 28 ರ ವರೆಗೆ ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಒಟ್ಟು 2.9 ಲಕ್ಷ ಸಾಲ ಖಾತೆಗಳಿಗೆ 1440 ಕೋಟಿ ರೂ. ಬಿಡುಗಡೆಗೊಳಿಸಿದ್ದಾರೆ.

ಜನವರಿ 28ರ ವರೆಗೆ ಸಹಕಾರಿ ಬ್ಯಾಂಕುಗಳ 1.4 ಲಕ್ಷ ಸಾಲಖಾತೆಗಳಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.

768 ಕೋಟಿ ರೂ. ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ 150125 ಸಾಲಖಾತೆಗಳಿಗೆ 672.5 ಕೋಟಿ ರೂ. ಬೆಳೆಸಾಲ ಮನ್ನಾ ಮೊತ್ತ ಬಿಡುಗಡೆ ಮಾಡಲಾಗಿದೆ.

ಈ ಹಿಂದೆ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರವು ನಾಲ್ಕು ಹಂತಗಳಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ತಿಳಿಸಿದ್ದರು. ಆದರೆ ಇತ್ತೀಚೆಗೆ ನಡೆದ ಕಾರ್ಯಕ್ರಮ ಒಂದರಲ್ಲಿ ಸಿಎಂ ಸಾಲಮನ್ನಾ ಯೋಜನೆಗೆ ಅಗತ್ಯವಾದ ಸಂಪೂರ್ಣ ಹಣವನ್ನು ಈ ಸಲದ ಬಜೆಟ್‌ನಲ್ಲೇ ನಿಗದಿಮಾಡುವುದಾಗಿ ಭರವಸೆ ನೀಡಿದ್ದರು. ಈ ಮೂಲಕ ಒಂದೇ ಹಂತದಲ್ಲಿ ಸಾಲಮನ್ನಾ ಯೋಜನೆಯನ್ನು ಅನುಷ್ಠಾನಕ್ಕೆ ತರುವುದಾಗಿ ಅವರು ತಿಳಿಸಿದ್ದರು.

ಒಂದೇ ಕಂತಿನಲ್ಲಿ ರೈತರ ಸಾಲ ಮನ್ನಾ ಮಾಡುವುದರಿಂದ ಮಧ್ಯವರ್ತಿಗಳ ಹಾವಳಿ ಕೂಡ ತಪ್ಪಲಿದೆ. ಈ ಯೋಜನೆಯ ಸಂಪೂರ್ಣ ಫಲಾನುಭಾವಿಗಳು ರೈತರೇ ಆಗಬೇಕೆಂದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ರೈತರ ಖಾತೆಗೆ ನೇರವಾಗಿ ಜಮೆ ಆಗುವಂತಹ ವ್ಯವಸ್ಥೆಯನ್ನು ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಹೀಗಾಗಿ ಸಾಲ ಮನ್ನಾ ಯೋಜನೆ ನಿಧಾನಗೊಳ್ಳಲು ಪ್ರಮುಖ ಕಾರಣ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದರು.