ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ‘ಜನಧ್ವನಿ’ ಧರಣಿ ಸತ್ಯಾಗ್ರಹ -Vishwanews24
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಮತ್ತು ಮಾಜಿ ಸಿಎಂ ದಿ.ದೇವರಾಜ್ ಅರಸು ಅವರ ಜನ್ಮ ದಿನಾಚರಣೆ ಮಂಗಳೂರಲ್ಲಿ ನಡೆಯಿತು.
ಇದೇ ವೇಳೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದ ಎದುರುಗಡೆ ‘ಜನಧ್ವನಿ’ ಧರಣಿ ಸತ್ಯಾಗ್ರಹ ನಡೆಯಿತು. ಈ ವೇಳೆ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.
ಧರಣಿಯಲ್ಲಿ ಶಾಸಕ ಯು.ಟಿ. ಖಾದರ್, ಮಾಜಿ ಶಾಸಕ ಮೊಯ್ದಿನ್ ಬಾವ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ , ಜಿಲ್ಲಾ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
