ಸರ್ಕಾರ ಬಿಗಿ ಕ್ರಮ ಕೈಗೊಳ್ಳದಿದ್ದಕ್ಕೆ ಕೊರೊನಾ ಸೋಂಕಿನ ಪ್ರಕರಣ ಹೆಚ್ಚಾಗಿವೆ: ಸಿದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ಸರ್ಕಾರ ಬಿಗಿ ಕ್ರಮ ಕೈಗೊಳ್ಳದಿದ್ದಕ್ಕೆ ಕೊರೊನಾ ಸೋಂಕಿನ ಪ್ರಕರಣ ಹೆಚ್ಚಾಗಿವೆ: ಸಿದ್ದರಾಮಯ್ಯ -Vishwanews24

ಕೊಪ್ಪಳ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ರಾಜ್ಯ ಸರ್ಕಾರದ ತಪ್ಪಿನಿಂದಲೇ ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಶುರುವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ತಪ್ಪಿನಿಂದಲೇ ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಶುರುವಾಗಿದೆ. ಸರ್ಕಾರ ದುಡ್ಡು ಹೊಡೆಯೋದ್ರಲ್ಲಿ ಕಾಲಹರಣ ಮಾಡುತ್ತಿದೆ. ನಿನ್ನೆ ಒಂದೇ ದಿನ 10 ಸಾವಿರಕ್ಕೂ ಅಧಿಕ ಕೇಸ್ ಬಂದಿವೆ. ಸರ್ಕಾರ ಬಿಗಿ ಕ್ರಮ ಕೈಗೊಳ್ಳದಿದ್ದಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗಿವೆ ಎಂದರು.

ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ. ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಮಾಡುತ್ತಿಲ್ಲ. ಹೀಗಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದರು.

ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೇಲಿದ್ದ ಚೆಕ್ ಬೌನ್ಸ್ ಪ್ರಕರಣ ಹಿಂಪಡೆಯಲು ನಿರ್ಧಾರ -Vishwanews24