ಸಲಿಂಗಕಾಮ ಪ್ರಕರಣ : ಸೂರಜ್ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ – vishwanews24
ಸಲಿಂಗಕಾಮ ಪ್ರಕರಣ : ಸೂರಜ್ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ
ಬೆಂಗಳೂರು: ಹಾಸನದ ಜೆಡಿಎಸ್ ಕಾರ್ಯಕರ್ತನನ್ನು ಸಲಿಂಗಕಾಮಕ್ಕೆ ಬಳಕೆ ಮಾಡಿಕೊಂಡ ಆರೋಪದಲ್ಲಿ ನಿನ್ನೆ ಬಂಧನವಾಗಿದ್ದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣನನ್ನು 8 ದಿನಗಳ ಕಾಲ ಅಪರಾಧ ತನಿಖಾ ಇಲಾಖೆ (Crime Investigation Department-ಸಿಐಡಿ) ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಲಾಗಿದೆ.
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದ ನಟ ವಿನೋದ್ ಪ್ರಭಾಕರ್ – vishwanews24
ಸೂರಜ್ ರೇವಣ್ಣ ವಿರುದ್ಧ ಹಾಸನದಲ್ಲಿ ಸಲಿಂಗಕಾಮದ ಕೇಸ್ ದಾಖಲಾಗುತ್ತಿದ್ದಂತೆ ಆತನನ್ನು ಬಂಧಿಸಿದ್ದ ಜಿಲ್ಲಾ ಪೊಲೀಸರು ತನಿಖೆ ಆರಂಭಿಸಿದ್ದರು. ಆದರೆ, ರಾಜ್ಯ ಸರ್ಕಾರದಿಂದ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ನೀಡಲಾಗಿತ್ತು. ಇದರ ಬೆನ್ನಲ್ಲಿಯೇ ನಿನ್ನೆ ಸಂಜೆ ವೇಳೆಗೆ ಹಾಸನದಿಂದ ಬೆಂಗಳೂರಿಗೆ ಸೂರಜ್ ರೇವಣ್ಣನನ್ನು ಕರೆತಂದಿದ್ದ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿ ಇಟ್ಟಿದ್ದರು. ಇಂದು ಮಧ್ಯಾಹ್ನ ಕೋರ್ಟ್ ಮುಂದೆ ಹಾಜರುಪಡಿಸಿದ ಸಿಐಡಿ ಪೊಲೀಸರಿ ಕೇಸಿನ ಸಂಬಂಧ ವಿಚಾರಣೆ ನಡೆಸುವುದಕ್ಕಾಗಿ 14 ದಿನ ವಶಕ್ಕೆ ನೀಡುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿದರು. ಆದರೆ, ನ್ಯಾಯಾಧೀಶರು 8 ದಿನಗಳ ಕಾಲ ಸಿಐಡಿ ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.
