ಸಾಮಾಜಿಕ ನ್ಯಾಯದ ಬಗ್ಗೆ ವಿಶೇಷ ಕಾಳಜಿ ಇಟ್ಟಿರುವ ಮುಖ್ಯಮಂತ್ರಿ ಅವರ ಸಾಧನೆ ಮಾದರಿ : ರಮಾನಾಥ ರೈ – vishwanews24

Featured, ದಕ್ಷಿಣ ಕನ್ನಡ

 

ಸಾಮಾಜಿಕ ನ್ಯಾಯದ ಬಗ್ಗೆ ವಿಶೇಷ ಕಾಳಜಿ ಇಟ್ಟಿರುವ ಮುಖ್ಯಮಂತ್ರಿ ಅವರ ಸಾಧನೆ ಮಾದರಿ : ರಮಾನಾಥ ರೈ

ಮಂಗಳೂರು: ಹಿಂದುಳಿದ ವರ್ಗಗಳ ಮುಖಂಡರಾಗಿ ಸಾಮಾಜಿಕ ನ್ಯಾಯದ ಬಗ್ಗೆ ವಿಶೇಷ ಕಾಳಜಿ ಇಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಧನೆ ಮಾದರಿಯಾದದ್ದು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದಿಣ ದೇವರಾಜ ಅರಸು ಅವರ ದಾರಿಯಲ್ಲೇ ರಾಜ್ಯದ ಸೇವೆ ಮಾಡಿ ಮುನ್ನಡೆಸಿದ್ದಾರೆ. ಪ್ರಣಾಳಿಕೆಯಲ್ಲಿ ನೀಡಿದ ಶೇ.95ಕ್ಕೂ ಅಧಿಕ ಭರವಸೆ ಈಡೇರಿಸಿದ ಅವರ ಹಲವು ಕಾರ್ಯಕ್ರಮಗಳು ಇಂದಿಗೂ ಮೆಚ್ಚುಗೆ ಪಡೆದುಕೊಂಡಿವೆ ಎಂದರು.

ಉಡುಪಿ: ಇಂದು ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶ ಮೆರವಣಿಗೆ: ಸಂಚಾರ ನಿಯಮದಲ್ಲಿ ಬದಲಾವಣೆ – vishwanews24

ಗ್ಯಾರಂಟಿ ಅನುಷ್ಠಾನದ ಮೂಲಕ ಜನ ಮೆಚ್ಚುವ ಕೆಲಸ ಮಾಡಿರುವ ಅವರು ಅಕ್ಕಿ ನೀಡಲು ಕೇಂದ್ರ ನಿರಾಕರಿಸಿದ ಸಂದರ್ಭ ಅಕ್ಕಿ ಬದಲು ಹಣ ನೀಡುವ ನಿರ್ಧಾರ ಕೈಗೊಂಡಿದ್ದರು ಎಂದರು.

ಆಹಾರ ಭದ್ರತೆ ಕಾಯ್ದೆ ಅನುಷ್ಠಾನಗೈದ ಮೊದಲ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ದ.ಕ. ಜಿಲ್ಲೆಗೂ ಅವರ ಕೊಡುಗೆ ಅಪಾರ ಎಂದು ವಿವರಿಸಿದರು. ಬ್ಲಾಕ್ ಅಧ್ಯಕ್ಷ ಪದ್ಮನಾಭ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.

Leave a Reply