ಸಿಎಂ ಕೇಜ್ರಿವಾಲ್ ಸಮ್ಮುಖದಲ್ಲಿ ಎಎಪಿ ಪಕ್ಷ ಸೇರಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ – Vishwanews24

Featured, ರಾಷ್ಟ್ರ ನ್ಯೂಸ್

ಸಿಎಂ ಕೇಜ್ರಿವಾಲ್ ಸಮ್ಮುಖದಲ್ಲಿ ಎಎಪಿ ಪಕ್ಷ ಸೇರಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್

ನವದೆಹಲಿ: ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ.

ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಇಂದು ಆಪ್ ನಾಯಕ ಹಾಗೂ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.ಈ ಸಂದರ್ಭದಲ್ಲಿ ಮನೀಶ್ ಸಿಸೋಡಿಯಾ ಮತ್ತಿತರ ನಾಯಕರು ಉಪಸ್ಥಿತರಿದ್ದರು.

ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ಸ್ವಯಂ ನಿವೃತ್ತಿ ಕೋರಿ ಸೆಪ್ಟೆಂಬರ್ 2021ರಲ್ಲಿ ಭಾಸ್ಕರ್ ರಾವ್ ರಾಜೀನಾಮೆ ಸಲ್ಲಿಸಿದ್ದರು. ನಿರ್ಧಾರ ಪುನರ್ ಪರಿಶೀಲನೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿತ್ತು. ಆದರೆ ಈ ನಿರ್ಧಾರದಿಂದ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಸರ್ಕಾರ ರಾಜೀನಾಮೆ ಅಂಗೀಕರಿಸಿತ್ತು.

ಪರೀಕ್ಷಾ ಸಮಯದಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುವ ಉಪನ್ಯಾಸಕರು ಹಿಜಬ್ ಧರಿಸಿ ಹಾಜರಾಗುವಂತಿಲ್ಲ – Vishwanews24

 

Leave a Reply