ಸಿಎಂ ಗೃಹ ಕಚೇರಿಗೆ ಮುತ್ತಿಗೆ ಯತ್ನ : ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ – Vishwanews24
ಸಿಎಂ ಗೃಹ ಕಚೇರಿಗೆ ಮುತ್ತಿಗೆ ಯತ್ನ : ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ ..
ಈಶ್ವರಪ್ಪ ರಾಜೀನಾಮೆ ನೀಡುವವರೆಗೂ ನಾವು ಹೋರಾಟ ನಿಲ್ಲಿಸುವುದಿಲ್ಲ..
ಮುಂದಿನ ಐದು ದಿನಗಳ ಕಾಲ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ನಡೆಸುತ್ತೇವೆ..
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ..
ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಸಿಎಂ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ರೇಸ್ ಕೋರ್ಸ್ ರಸ್ತೆಯಿಂದ ಪಾದಯಾತ್ರೆ ಹೊರಟ ಕಾಂಗ್ರೆಸ್ ನಾಯಕರನ್ನು ಆನಂದ ರಾವ್ ವೃತ್ತದ ಬಳಿ ಪೊಲೀಸರು ತಡೆದರು. ಆದರೆ ಬ್ಯಾರಿಕೇಡ್ ಹಾರಿ ಮುಂದೆ ಹೋಗಲು ಕಾಂಗ್ರೆಸ್ ನಾಯಕರು ಪ್ರಯತ್ನ ನಡೆಸಿದರು. ಖುದ್ದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಬ್ಯಾರಿಕೇಡ್ ಮೇಲೆ ಕೆಲ ಹೊತ್ತು ನಿಂತು ಹಂಗಾಮ ಸೃಷ್ಟಿಸಿದರು. ಹೀಗಾಗಿ ಅಂತಿಮವಾಗಿ ಪೊಲೀಸರು ಎಲ್ಲ ನಾಯಕರು ಹಾಗೂ ಕಾರ್ಯಕರ್ತರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡರು.
#WATCH | Bengaluru: Several Congress leaders detained as they were marching towards CM Bommai's residence in view of their demand for Karnataka Minister KS Eshwarappas's resignation in connection with contractor Santosh Patil's death. pic.twitter.com/UhFlCyIqJJ
— ANI (@ANI) April 14, 2022
ಇದಕ್ಕೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಈಶ್ವರಪ್ಪ ಬಂಧನ ಮಾಡುವವರೆಗೂ ನಮ್ಮ ಹೋರಾಟ ಇರುತ್ತದೆ. ಮುಂದಿನ ಐದು ದಿನಗಳ ಕಾಲ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
ಈಶ್ವರಪ್ಪ ರಾಜೀನಾಮೆ ನೀಡುವವರೆಗೂ ನಾವು ಹೋರಾಟ ನಿಲ್ಲಿಸುವುದಿಲ್ಲ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಕಾಲಮಿತಿ ನಿಗದಿ – Vishwanews24
