ಸಿಎಂ, ಸಚಿವರ, ಶಾಸಕರ ಸಂಬಳ, ಚರ್ಚೆ ಆಗದ ಅಧಿವೇಶನಕ್ಕೆ ಕೋಟಿ, ಕೋಟಿ ಖರ್ಚು ಮಾಡಿರುವ ಬಿಜೆಪಿ ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಸೈಕಲ್ ನೀಡಲು ಹಿಂದೇಟು : ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ:vishwanews24 https://www.vishwanews24.com/?p=59131

Featured, ರಾಜ್ಯ ನ್ಯೂಸ್

ಸಿಎಂ, ಸಚಿವರ, ಶಾಸಕರ ಸಂಬಳ, ಚರ್ಚೆ ಆಗದ ಅಧಿವೇಶನಕ್ಕೆ ಕೋಟಿ, ಕೋಟಿ ಖರ್ಚು ಮಾಡಿರುವ ಬಿಜೆಪಿ ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಸೈಕಲ್ ನೀಡಲು ಹಿಂದೇಟು : ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ:vishwanews24

ರಾಜ್ಯ ನ್ಯೂಸ್:  ಇಂದಿನಿಂದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಿದ್ದು, ಈ ಹೊತ್ತಿನಲ್ಲಿಯೇ ಮಕ್ಕಳಿಗೆ ಈ ಬಾರಿ ಸರ್ಕಾರ ಸೈಕಲ್ ಭಾಗ್ಯ ಯೋಜನೆಯನ್ನು ನಿಲ್ಲಿಸಿದೆ ಎನ್ನಲಾಗುತ್ತಿದೆ.ಶಾಲೆ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಮೊದಲ 15 ದಿನ ಮಕ್ಕಳಿಗೆ ಆಟದ ಜೊತೆ ಪಾಠವೂ ಇರಲಿದೆ. ಎರಡು ವರ್ಷ ಕೊರೊನಾದಿಂದಾದ ಕಲಿಕಾ ನಷ್ಟವನ್ನು ತುಂಬಲು ಈ ಬಾರಿ 15 ದಿನ ಮುಂಚಿತವಾಗಿ ತರಗತಿಗಳನ್ನು ಪ್ರಾರಂಭ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲೆಗಳನ್ನು ತಳಿರು-ತೋರಣಗಳಿಂದ ಅಲಂಕರಿಸಲಾಗಿದೆ.

ಈ ಎಲ್ಲದರ ಮಧ್ಯೆ ಶಾಲೆಗಳ ಆರಂಭವಾಗುತ್ತಿರುವ ಸಂದರ್ಭದಲ್ಲಿಯೇ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಈ ಬಾರಿಯೂ ರಾಜ್ಯದ ಮಕ್ಕಳಿಗೆ ಸೈಕಲ್ ಭಾಗ್ಯ ಇಲ್ಲ. ಸಿಎಂ, ಸಚಿವರ, ಶಾಸಕರ ಸಂಬಳ, ಚರ್ಚೆ ಆಗದ ಅಧಿವೇಶನಕ್ಕೆ ಕೋಟಿ, ಕೋಟಿ ಖರ್ಚು ಮಾಡಿರುವ ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಸೈಕಲ್ ನೀಡಲು ಕುಂಟು ನೆಪವನ್ನು ಹೇಳುತ್ತಿದೆ.

ಬಜೆಟ್‍ನಲ್ಲಿ ಅನುದಾನ ಮೀಸಲಿಡದ ಕಾರಣ 2022-23ನೇ ಸಾಲಿನ ಮಕ್ಕಳಿಗೆ ಸೈಕಲ್ ವಿತರಿಸುತ್ತಿಲ್ಲ. ಆರ್ಥಿಕ ಕೊರತೆಯ ನೆಪವೊಡ್ಡಿ ಸೈಕಲ್ ಯೋಜನೆಗೆ ಸರ್ಕಾರ ಬ್ರೇಕ್ ಹಾಕಿದೆ. ಸೈಕಲ್ ವಿತರಿಸಲು ಕುಂಟು ನೆಪ ಹೇಳುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

Leave a Reply