ಸಿಎಎ ಜಾರಿ ಮಾಡಬೇಕೇ ಅಥವಾ ತಿರಸ್ಕರಿಸಬೇಕೆ ಎಂಬುದನ್ನು ಸಿಎಂ ಚರ್ಚೆ ಮಾಡಿ ತೀರ್ಮಾನ : ಡಾ ಜಿ ಪರಮೇಶ್ವರ್ – Vishwanews24
ಸಿಎಎ ಜಾರಿ ಮಾಡಬೇಕೇ ಅಥವಾ ತಿರಸ್ಕರಿಸಬೇಕೆ ಎಂಬುದನ್ನು ಸಿಎಂ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ: ಡಾ ಜಿ ಪರಮೇಶ್ವರ್
ಬೆಂಗಳೂರು ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ ಅಧಿಸೂಚನೆ ಹೊರಡಿಸಿದ್ದು, ಇದು ದೇಶದಾದ್ಯಂತ ಜಾರಿಯಾಗಬೇಕಿದೆ. ಈ ಮಧ್ಯೆ, ಪ್ರತಿಪಕ್ಷಗಳಿಂದ ಸಿಎಎ ಜಾರಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಮತ್ತೊಂದೆಡೆ, ಕಾಂಗ್ರೆಸ್ಆಡಳಿತ ಇರುವ ಕರ್ನಾಟಕದಲ್ಲಿಯೂ ಸಿಎಎ ಜಾರಿಯಾಗಲಿದೆಯೇ ಎಂಬ ಕುತೂಹಲ ಮೂಡಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ , ಸಿಎಎ ಜಾರಿ ವಿಚಾರವಾಗಿ ಇನ್ನೂ ಏನೂ ಚರ್ಚೆ ಮಾಡಿಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಸಿಎಎ ಜಾರಿ ವಿಚಾರವಾಗಿ ಇನ್ನೂ ಚರ್ಚೆ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ನಡೆಸಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತಾರೆ. ಸಿಎಎ ಜಾರಿ ಮಾಡಬೇಕೇ ಅಥವಾ ತಿರಸ್ಕರಿಸಬೇಕೆ ಎಂಬುದನ್ನು ಅವೆಲ್ಲವನ್ನೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಬಳ್ಳಾರಿಯಲ್ಲಿ ಓರ್ವ ವಶಕ್ಕೆ – Vishwanews24
