ಸಿಡಿ ಪ್ರಕರಣ : ಪೊಲೀಸ್ ವಿಚಾರಣೆಗೆ ಹಾಜರಾದ ದಿನೇಶ್ ಕಲ್ಲಹಳ್ಳಿ -Vishwanews24
ಸಿಡಿ ಪ್ರಕರಣ : ಪೊಲೀಸ್ ವಿಚಾರಣೆಗೆ ಹಾಜರಾದ ದಿನೇಶ್ ಕಲ್ಲಹಳ್ಳಿ -Vishwanews24
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಬಯಲು ಪ್ರಕರಣ ಸಂಬಂಧ ಸಿಡಿ ಬಿಡುಗಡೆ ಮಾಡಿದ್ದ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಮಂಗಳೂರು: ಉಜಿರೆ ಎಸ್ ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಶ್ರೇಯಾ ರೈ ದುಬೈನಲ್ಲಿ ಕೋವಿಡ್ ಗೆ ಬಲಿ -Vishwanews24
ದಿನೇಶ್ ಕಲ್ಲಹಳ್ಳಿ ಅವರು ತಮಗೆ ಸೂಕ್ತ ಭದ್ರತೆ ನೀಡುವವರೆಗೂ ಪೊಲೀಸರ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಹೇಳಿದ್ದರು. ಇದೀಗ ದಿಢೀರ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಮಾರ್ಚ್ 9 ರಂದು ವಿಚಾರಣೆಗೆ ಬರುವುದಾಗಿ ಹೇಳಿದ್ದ ದಿನೇಶ್ ಕಲ್ಲಳ್ಳಿ ಇಂದು ವಿಚಾರಣೆಗೆ ಹಾಜರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಈ ವೇಳೆ ಮಾತನಾಡಿದ ಅವರು, ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ತನಿಖೆಗೆ ಪೂರಕವಾದ ಮಾಹಿತಿಯನ್ನು ನೀಡಿದ್ದು, ದೂರಿನಲ್ಲಿರುವ ಸತ್ಯಾಸತ್ಯಾತೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಹೇಳಿದ್ದೇನೆ ಎಂದರು.
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿದೆ : HDK -Vishwanews24
