ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಅಭಿಮಾನಿಗಳಿಂದ ಶಬರಿಮಲೆಗೆ ಹರಕೆ – Vishwanews24

Featured, ರಾಜ್ಯ ನ್ಯೂಸ್

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಅಭಿಮಾನಿಗಳಿಂದ ಶಬರಿಮಲೆಗೆ ಹರಕೆ

ಯಾದಗಿರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ ಎಂದು ಅಯ್ಯಪ್ಪ ಸ್ವಾಮಿಗೆ ಅಭಿಮಾನಿಗಳು ಹರಕೆ ಹೊತ್ತಿದ್ದಾರೆ.

ಈ ಬಾರಿ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ ಬರಲಿ, ಸಿದ್ದು ಸಿಎಂ ಆಗಲಿ ಯಾದಗಿರಿಯ ಶಹಪುರ ಕ್ಷೇತ್ರದಲ್ಲಿ ಶರಣಬಸಪ್ಪಗೌಡ ದರ್ಶನಾಪುರ  ಮತ್ತೊಮ್ಮೆ ಶಾಸಕರಾಗಲಿ ಎಂದು ತಲೆ ಮೇಲೆ ಇರುಮುಡಿ ಹೊತ್ತು, ಕೈಯಲ್ಲಿ ಸಿದ್ದರಾಮಯ್ಯ, ದರ್ಶನಾಪೂರ ಭಾವಚಿತ್ರ ಹಿಡಿದು ಅಭಿಮಾನಿಗಳು ಕೇರಳದ ಶಬರಿಮಲೈ ಅಯ್ಯಪ್ಪಸ್ವಾಮಿ ಸನ್ನಿಧಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರದ ಉದ್ಯಮಿ ಗುರು ಮಣಿಕಂಠ ಹಾಗೂ ಸ್ನೇಹಿತರು ಹರಕೆ ಕಟ್ಟಿಕೊಂಡಿದ್ದಾರೆ.

ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ : ಅನಿತಾ ಕುಮಾರಸ್ವಾಮಿ ಸ್ಪಷ್ಟನೆ – Vishwanews24

Leave a Reply