ಸಿದ್ದರಾಮಯ್ಯ ಸಿದ್ದರಾಮಯ್ಯನೇ, ಅವರಿಗೆ ಯಾರು ಸರಿಸಾಟಿ ಅಲ್ಲ : ನಿರಂಜನಾನಂದಪುರಿ ಸ್ವಾಮೀಜಿ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಬಾಗಲಕೋಟೆ : ದೇವೇಗೌಡರ ಕುಟುಂಬ ಮತ್ತೊಮ್ಮೆ ಹುಟ್ಟಿ ಬಂದರೂ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಹಾಳು ಮಾಡಲು ಆಗಲ್ಲ ಎಂದು ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.

ಜಿಲ್ಲೆಯ ಮುಧೋಳದಲ್ಲಿ ಸುದ್ದಿಗಾರರಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ, ಸಿದ್ದರಾಮಯ್ಯನೇ. ಅವರಿಗೆ ಯಾರು ಸರಿಸಾಟಿ ಅಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಡವರು ಹಳ್ಳಿಯಿಂದ ನಗರಕ್ಕೆ ಹೋದ ಸಂದರ್ಭದಲ್ಲಿ 70-80 ರೂಪಾಯಿ ಕೊಟ್ಟು ಊಟ ಮಾಡಲು ಸಾಧ್ಯವಾಗಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಮೂಲಕ ಬಡವರ ಹೊಟ್ಟೆ ತುಂಬಿಸುವ ಕೆಲಸ ಮಾಡಿದ್ದಾರೆ. ಈ ಯೋಜನೆಯನ್ನು ಮುನ್ನಡೆಸಿಕೊಂಡು ಹೋದರೆ ಉತ್ತಮ ಎಂದು ಸಲಹೆ ನೀಡಿದರು.

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯರನ್ನು ಕಟ್ಟಿ ಹಾಕುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಟಗರು ಗುಮ್ಮುತ್ತೆ ಎನ್ನುವುದನ್ನು ಕಾದು ನೋಡಿ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.