ಸಿದ್ದರಾಮಯ್ಯನವರನ್ನು ಕಂಡರೆ ಬಿಜೆಪಿಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ : ದಿನೇಶ್ ಗುಂಡುರಾವ್ – Vishwanews24
ಮಾಂಸಹಾರಿಗಳು ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು ಬಿಜೆಪಿಯವರು ಹೇಳಲಿ
ಬೆಂಗಳೂರು: ಮಾಂಸಹಾರ ಸೇವನೆಗೆ ಸಂಬಂಧಿಸಿದಂತೆ ಬಿಜೆಪಿಯವರು ಕೀಳು ರಾಜಕಾರಣ ಮಾಡುತ್ತಿದ್ದು, ಸಿದ್ದರಾಮಯ್ಯನವರನ್ನು ಕಂಡರೆ ಬಿಜೆಪಿಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಸಿದ್ದರಾಮಯ್ಯರಾಗಲಿ ಅಥವಾ ಇನ್ಯಾರೆ ಆಗಿರಲಿ ಏನನ್ನು ತಿನ್ನಬೇಕು?ಏನನ್ನು ತಿನ್ನಬಾರದು ಎಂದು ಬಿಜೆಪಿಯವರು ನಿರ್ಧರಿಸಬೇಕೆ?ನಮ್ಮ ಆಹಾರ, ನಮ್ಮ ಹಕ್ಕು.ಇದನ್ನು ಕೇಳಲು ಬಿಜೆಪಿಯವರಿಗೆ ಅಧಿಕಾರ ಕೊಟ್ಟವ ರ್ಯಾರು? ಊಟ ತನ್ನಿಚ್ಛೆ, ನೋಟ ಪರರಿಚ್ಛೆ ಅಲ್ಲವೇ.?” ಎಂದು ಪ್ರಶ್ನಿಸಿದ್ದಾರೆ.
4@siddaramaiah ಕಂಡರೆ BJPಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ.
ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ ಮಾಡುತ್ತಿದ್ದಾರೆ.ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು #BJP ಯವರು ಹೇಳಲಿ
ಹೀಗೆ ಹೇಳುವ ತಾಕತ್ತು BJPಯವರಿಗಿದೆಯೇ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 23, 2022
“ಬೇಡರ ಕಣ್ಣಪ್ಪ ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ.ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೆ?ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ, ಇದೇ ಅಂತರಂಗ-ಶುದ್ಧಿ, ಇದೇ ಬಹಿರಂಗ-ಶುದ್ಧಿ, ಇದೇ ಕೂಡಲಸಂಗಮನೊಲಿಸುವ ಪರಿ! ಎಂದಿದ್ದಾರೆ ಬಸವಣ್ಣ.ಭಕ್ತಿ ಶುದ್ಧವಾಗಿರಬೇಕು “ಎಂದು ಹೇಳಿದ್ದಾರೆ.
ಭಟ್ಕಳ: ಬಾಲಕನ ಅಪಹರಣ ಪ್ರಕರಣ: ಮೂವರ ಬಂಧನ – Vishwanews24
ಚಿಕ್ಕಮಗಳೂರು, ಕೊಡಗು ಮತ್ತು ಹಾಸನದ ಸಕಲೇಶಪುರದಲ್ಲಿ ಮದುವೆಯ ದಿನವೇ ಮಾಂಸಹಾರ ಮಾಡುತ್ತಾರೆ.ಅದು ಅವರ ಆಹಾರ ಪದ್ದತಿ.ಇನ್ನು ಮಲೆನಾಡಿನ ಕೆಲವು ಕಡೆ ಎಲ್ಲಾ ಹಬ್ಬಗಳಿಗೂ ಮಾಂಸಹಾರ ಮಾಡುತ್ತಾರೆ. ಸಿ.ಟಿ ರವಿ ಮತ್ತು ಪ್ರತಾಪ ಸಿಂಹ ಮಲೆನಾಡಿನವರು.ಗಣೇಶನ ಹಬ್ಬದ ದಿವಸ ಅವರ ಭಾಗದಲ್ಲಿ ಮಾಂಸಹಾರ ಮಾಡುವುದನ್ನು ಅವರು ನಿರಾಕರಿಸುತ್ತಾರೆಯೇ? ಎಂದಿದ್ದಾರೆ.
ಸಿದ್ದರಾಮಯ್ಯನವರನ್ನು ಕಂಡರೆ ಬಿಜೆಪಿಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ.ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ ಮಾಡುತ್ತಿದ್ದಾರೆ.ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು ಬಿಜೆಪಿಯವರು ಹೇಳಲಿ ಹೀಗೆ ಹೇಳುವ ತಾಕತ್ತು ಬಿಜೆಪಿಯವರಿಗಿದೆಯೇ? ಎಂದು ಸವಾಲ್ ಹಾಕಿದ್ದಾರೆ.
ಹೃದಯಾಘಾತದಿಂದ ನಟಿ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ನಿಧನ – Vishwanews24
