ಸಿದ್ದಾಂತಕ್ಕೆ ವಿರುದ್ದವಾಗಿ ಕೆಲಸ ಮಾಡಲು ಸಾಧ್ಯವಿಲ್ಲ : ಸಸಿಕಾಂತ್ ಸೆಂಥಿಲ್ -Vishwanews24
ಮಂಗಳೂರು: ಸಿದ್ದಾಂತಕ್ಕೆ ವಿರುದ್ದವಾಗಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯ ಗೋಡೆಗಳು ಕುಸಿಯುತ್ತಿವೆ. ಮುಂದಿನ ದಿನಗಳಲ್ಲಿ ದೇಶಕ್ಕೆ ಬಹಳಷ್ಟು ಸವಾಲುಗಳು ಎದುರಾಗಲಿದೆ. ಸಿದ್ದಾಂತಕ್ಕೆ ವಿರುದ್ದವಾಗಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಸೆಂಥಿಲ್ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದು ಕೊಂಡಿದ್ದಾರೆ.
ಹುದ್ದೆಯಲ್ಲಿ ಮುಂದುವರಿಯಬೇಕಾದರೆ ನಾನು ನಂಬಿದ ತತ್ವ, ಸಿದ್ಧಾಂತಗಳಿಗೆ ವಿರುದ್ಧವಾಗಿ ರಾಜಿ ಮಾಡಿಕೊಳ್ಳಬೇಕಿತ್ತು. ತತ್ವ, ಸಿದ್ಧಾಂತಕ್ಕೆ ಬದ್ಧನಾಗಿ ಉಳಿಯಬೇಕಿದ್ದರೆ ಐಎಎಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಬೇಕಿತ್ತು. ಎರಡನೆಯದ್ದನ್ನೇ ಆಯ್ಕೆ ಮಾಡಿಕೊಂಡಿದ್ದೇನೆ’ ಎಂದು ತಿಳಿಸಿದರು.
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕೆಲವು ಒತ್ತಡಗಳಿಂದ ರಾಜಿಯಾಗಿ ಕೆಲಸ ಮಾಡಬೇಕಾದ ಇಂಥಹ ಪರಿಸ್ಥಿತಿಯಲ್ಲಿ ಸಾರ್ವಜನಿಕ ಸೇವೆಯಲ್ಲಿ ನಾನು ಮುಂದುವರಿಯುವುದು ಸಮಂಜಸವಲ್ಲ ಎಂದು ಅನಿಸಿದ್ದರಿಂದ ನಾನು ರಾಜೀನಾಮೆ ನೀಡುತ್ತಿರುವೆ ಎಂದು ಸಸಿಕಾಂತ್ ಸೆಂಥಿಲ್ ಬರೆದುಕೊಂಡಿದ್ದಾರೆ.
ರಾಜೀನಾಮೆ ವಿಷಯ ಆತುರದಲ್ಲಿ ಕೈಗೊಂಡ ನಿರ್ಧಾರವಲ್ಲ. ಸಾಕಷ್ಟು ದಿನಗಳಿಂದಲೇ ಈ ಬಗ್ಗೆ ಯೋಚಿಸುತ್ತಿದ್ದೆ. ಈಗ ಕೈಗೊಂಡಿರುವ ನಿರ್ಧಾರವನ್ನು ಪುನರ್ ಪರಿಶೀಲಿಸುವ ಪ್ರಶ್ನೆಯೇ ಇಲ್ಲ’ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದರು.
2017ರ ಅಕ್ಟೋಬರ್ ನಿಂದ ಅವರು ದ.ಕ. ಜಿಲ್ಲಾಧಿಕಾರಿಗಳಾಗಿದ್ದರು. ಜಿಲ್ಲೆಯಲ್ಲಿ ಕಳೆದ ವರ್ಷದ ಭೀಕರ ಮಳೆ, ಈ ವರ್ಷದ ಪ್ರವಾಹ, ಅತಿವೃಷ್ಠಿ, ಡೆಂಗ್ಯು, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.
