ಸುಪ್ರೀಂ ತೀರ್ಪನ್ನು ಗೌರವಿಸುತ್ತೇವೆ ಆದರೆ, ತೃಪ್ತಿ ಇಲ್ಲ : ಸುನ್ನಿ ವಕ್ಫ್ ಬೋರ್ಡ್ -Vishwanews24
ನವದೆಹಲಿ: ಅಯೋಧ್ಯೆ ಭೂ ವಿವಾದದ ಬಗ್ಗೆ ಸುಪ್ರೀಂಕೋರ್ಟಿನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪನ್ನು ಗೌರವಿಸುತ್ತೇವೆ. ಆದರೆ, ತೃಪ್ತಿ ಇಲ್ಲ ಎಂದು ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ ಜಾಫರ್ ಯಾಬ್ ಜಿಲಾನಿ ಹೇಳಿದ್ದಾರೆ.
ನಾವು ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸುತ್ತೇವೆ. ಆದರೆ ಈ ತೀರ್ಪು ನಮಗೆ ತೃಪ್ತಿ ತಂದಿಲ್ಲ. ಮುಂದೆ ಏನು ಮಾಡಬಹುದು ಎಂಬುದನ್ನು ನಿರ್ಧಸರಿಸಲಾಗುವುದು ಎಂದು ಸುನ್ನಿ ವಕ್ಫ್ ಬೋರ್ಡ್ ವಕೀಲ ಝಾಫರ್ ಆಯಾಬ್ ಜಿಲಾನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸುನ್ನಿ ವಕ್ಫ್ ಬೋರ್ಡ್‌ಗೆ ಪ್ರತ್ಯೇಕ ಜಾಗ ಭೂಮಿ ನೀಡಿವಂತೆ ಸೂಪ್ರೀಂ ಕೋರ್ಟ್ ಸೂಚಿಸಿದೆ. ಆದರೆ, ಮಸೀದಿ ನಿರ್ಮಾಣಕ್ಕೆ ಬೇರೊಂದು ಜಾಗದಲ್ಲಿ ಪರ್ಯಾಯ ಭೂಮಿ ನೀಡುತ್ತಿರುವುದು ಸರಿಯಲ್ಲ. ತೀರ್ಪನ್ನು ಪೂರ್ಣವಾಗಿ ಪರಿಶೀಲಿಸಿ, ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ನಿರ್ಧರಿಸಲಾಗುವುದು ಎಂದು ವಕೀಲ ಜಿಲಾನಿ ತಿಳಿಸಿದ್ದಾರೆ.
Zafaryab Jilani, All India Muslim Personal Law Board: Respect the verdict but the judgement is not satisfactory. There should be no demonstration of any kind anywhere on it. #AyodhyaJudgment pic.twitter.com/g956DuJ5sB
— ANI (@ANI) November 9, 2019
