ಸುರತ್ಕಲ್: ಮಾದಕ ವ್ಯಸನಿ ದುಷ್ಕರ್ಮಿಗಳಿಂದ ತಲವಾರು ದಾಳಿ ಪ್ರಕರಣ :  ಮೂವರ ಬಂಧನ – Vishwanews24

Featured, ದಕ್ಷಿಣ ಕನ್ನಡ

ಸುರತ್ಕಲ್: ಮಾದಕ ವ್ಯಸನಿ ದುಷ್ಕರ್ಮಿಗಳಿಂದ ತಲವಾರು ದಾಳಿ ಪ್ರಕರಣ :  ಮೂವರ ಬಂಧನ

ಸುರತ್ಕಲ್: ಸುರತ್ಕಲ್ ನ ಚಿತ್ರಾಪುರ ಸಮೀಪದ ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಗಾಂಜಾ ಅಮಲಿನಲ್ಲಿ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿ, ರಿಕ್ಷಾಕ್ಕೆ ಹಾನಿ ಮಾಡಿದ ಘಟನೆಗೆ ಸಂಬಂಧಿಸಿದಂತೆ ಒಟ್ಟು ಮೂವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಭಾನುವಾರದಂದು ಘಟನೆ ಸಂಬಂಧ ಪ್ರತೀಕ್ ಎಂಬಾತನನ್ನು ಬಂಧಿಸಲಾಗಿತ್ತು. ಸೋಮವಾರ ಮತ್ತಿಬ್ಬರು ಆರೋಪಿಗಳಾದ ಅಮಲ್ ಅಜಯನ್ ಮತ್ತು ನಿಶಾಂತ್ ಬಂಧಿಸಲಾಗಿತ್ತು, ಇತರ ಮೂವರು ಆರೋಪಿಗಳಿಗೆ ಶೋಧ  ಮುಂದುವರಿದಿದೆ.

ಉಡುಪಿ : ಜಿಲ್ಲೆಯಲ್ಲಿ  ಮಾರ್ಚ್ 1 ರಿಂದ ತುರ್ತು ಸೇವೆ ಹೊರತುಪಡಿಸಿ ಇತರೇ ಸರ್ಕಾರಿ ಸೇವೆ ಸ್ಥಗಿತ – Vishwanews24

ಬಂಧಿತರ ವಿರುದ್ದ ಪೊಲೀಸರು ಐಪಿಸಿ ಸೆಕ್ಷನ್ ೩೦೭ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ

ಘಟನೆಯಲ್ಲಿ ಸುನಿಲ್ ಎಂಬ ರಿಕ್ಷಾ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು.ಕಡಲು ಕೊರೆತ ತಡೆಗೆ ಹಾಕಲಾಗಿದ್ದ ಕಲ್ಲುಗಳಲ್ಲಿ ಕಳೆದ ಹಲವು ತಿಂಗಳಿನಿಂದ ಮಾದಕ ವ್ಯಸನಿಗಳು ಅನೈತಿಕ ಚಟುವಟಿಕೆ ನಡೆಸುತ್ತಿದ್ದು, ಈ ಕುರಿತು ಗ್ರಾಮಸ್ಥರು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದರು.

ಉಡುಪಿ : ಜಿಲ್ಲೆಯಲ್ಲಿ  ಮಾರ್ಚ್ 1 ರಿಂದ ತುರ್ತು ಸೇವೆ ಹೊರತುಪಡಿಸಿ ಇತರೇ ಸರ್ಕಾರಿ ಸೇವೆ ಸ್ಥಗಿತ – Vishwanews24

Leave a Reply