ಸುರತ್ಕಲ್‌ : ಸಿಲಿಂಡರ್‌ ಸ್ಫೋಟ ಪ್ರಕರಣ ; ಚಿಕಿತ್ಸೆ ಫಲಿಸದೆ ಮತ್ತೋರ್ವ ಮಹಿಳೆಯ ಸಾವು – vishwanews24

Featured, ದಕ್ಷಿಣ ಕನ್ನಡ

ಸುರತ್ಕಲ್‌ ಸಿಲಿಂಡರ್‌ ಸ್ಫೋಟ ಪ್ರಕರಣ : ಚಿಕಿತ್ಸೆ ಫಲಿಸದೆ ಮತ್ತೋರ್ವ ಮಹಿಳೆಯ ಸಾವು

ಮಂಗಳೂರು: ಸುರತ್ಕಲ್‌ನ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ಡಿ. 18ರಂದು ಮಧ್ಯಾಹ್ನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡ ಘಟನೆಗೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೋರ್ವ ಮಹಿಳೆಯೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಡಿ. 26ರಂದು ಮನೆ ಯಜಮಾನ ವಾಮನ ಅವರ ಸಹೋದರಿ ಪುಷ್ಪಾ ಮೃತಪಟ್ಟರೆ, ಡಿ.27ರಂದು ಅವರ ಪತ್ನಿ ವಸಂತಿ ಅವರು ಕೂಡ ಮೃತಪಟ್ಟಿದ್ದಾರೆ. ಕಳೆದ 9 ದಿನಗಳಿಂದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಇಬ್ಬರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಉಡುಪಿ: ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಖಾದರ್‌, ಸೊರಕೆ ಭೇಟಿ – vishwanews24

Leave a Reply