ಸುಳ್ಯ : ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಚಿವ ಎಸ್.ಅಂಗಾರ – Vishwanews24
ಸುಳ್ಯ : ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಚಿವ ಎಸ್.ಅಂಗಾರ
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಸಚಿವ ಎಸ್. ಅಂಗಾರ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಪಕ್ಷ ಟಿಕೆಟ್ ನೀಡಿದ ಕುರಿತು ನನ್ನ ಅಸಮಾಧಾನವಿಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ರೀತಿ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ಲಾಭಿ ಮಾಡುವುದು ನನ್ನ ಗುಣವಲ್ಲ, ಈಗ ನನಗೆ ಅದೇ ಹಿನ್ನಡೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸುಳ್ಯದಲ್ಲಿ ಅಂಗಾರ ಆರು ಬಾರಿ ಶಾಸಕರಾಗಿ, ಕೊನೆಯಲ್ಲಿ ಸಚಿವರಾಗಿ ಕ್ಷೇತ್ರವನ್ನು ಮುನ್ನಡೆಸಿಕೊಂಡು ಬಂದಿದ್ದರು. ಇವರ ಬದಲು ಈ ಬಾರಿ ಮಹಿಳಾ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರಿಗೆ ಟಿಕೆಟ್ ನೀಡಿದೆ. ಪ್ರಸ್ತುತ ಇವರು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆಯಾಗಿದ್ದಾರೆ.
