ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ – vishwanews24

Featured, ದಕ್ಷಿಣ ಕನ್ನಡ

ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ ಮರವೊಂದು ಮುರಿದು ಮನೆಯ ಅಂಗಳಕ್ಕೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಪೈಚಾರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಶಾಫಿ ಪ್ರಗತಿ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಶಾಫಿ ಅವರ ಹಿರಿಯ ಸಹೋದರ ಹಸೈನಾರ್ ಅವರು ಮನೆಯ ಮೇಲ್ಛಾವಣಿಯಿಂದ ಇಳಿಯುವ ಮಳೆನೀರನ್ನು ಬಕೆಟ್‌ನಲ್ಲಿ ಸಂಗ್ರಹಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಮಂಗಳೂರು: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಮನೆಯ ಮುಂಭಾಗದಲ್ಲಿದ್ದ ತೆಂಗಿನ ಮರವು ಇದ್ದಕ್ಕಿದ್ದಂತೆ ಮುರಿದು ಅಂಗಳಕ್ಕೆ ಬೀಳುವುದನ್ನು ಗಮನಿಸಿದ ಹಸೈನಾರ್ ಕೂಡಲೇ ಅಲ್ಲಿಂದ ಸರಿದು ಅಪಾಯದಿಂದ ಪಾರಾಗಿದ್ದಾರೆ. ಮರ ಬೀಳುವ ಕೆಲವೇ ಕ್ಷಣಗಳ ಮೊದಲು ಶಾಫಿ ಅವರ ತಾಯಿ ಅದೇ ಸ್ಥಳದಲ್ಲಿ ನಿಂತಿದ್ದರು ಎನ್ನಲಾಗಿದೆ.

ತೆಂಗಿನ ಮರ ಮುರಿದು ಬಿದ್ದ ಈ ದೃಶ್ಯವು ಮನೆಯ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Leave a Reply