ಸುಳ್ಳು ಸುದ್ದಿಯ ಸೃಷ್ಟಿಕರ್ತರು , ಫೇಕ್ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ : ಸಿಎಂ ಸಿದ್ದರಾಮಯ್ಯ – Vishwanews24
ಮುಸ್ಲಿಮರ ಓಟು ಸಾಕು : ಸಿಎಂ ಸಿದ್ದರಾಮಯ್ಯ ವಿರುದ್ಧ ‘ಸುಳ್ಳು ಸುದ್ದಿ’ ವೈರಲ್
ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಫೇಕ್ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ : ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿ–ಜೆಡಿಎಸ್ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು ಎಂದು ಹೇಳಿದ್ದಾರೆ.
ಬಿಜೆಪಿ – ಜೆಡಿಎಸ್ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ… pic.twitter.com/6Gin6L9Dvz
— Siddaramaiah (@siddaramaiah) April 10, 2024
ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು.
ಮಂಗಳೂರು: ಎ.14ರಂದು ನಡೆಯಬೇಕಿದ್ದ ಮೋದಿ ಸಮಾವೇಶ ರದ್ದು, ರೋಡ್ ಶೋ ಮಾತ್ರ – Vishwanews24
