ಸೂಲಿಬೆಲೆಗೆ ಕಲಬುರಗಿ ಜಿಲ್ಲಾ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ಹೈಕೋರ್ಟ್‌ – Vishwanews24

Featured, ರಾಜ್ಯ ನ್ಯೂಸ್

ಸೂಲಿಬೆಲೆಗೆ ಕಲಬುರಗಿ ಜಿಲ್ಲಾ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ಹೈಕೋರ್ಟ್‌

ಕಲಬುರಗಿ: ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ನಮೋ ಭಾರತ್‌  ಕಾರ್ಯಕ್ರಮ ನಿರ್ಬಂಧ ಹೇರಿದ್ದ ಕಲಬುರಗಿ ಜಿಲ್ಲಾಡಳಿತಕ್ಕೆ ಭಾರೀ ಮುಖಭಂಗವಾಗಿದೆ. ಚಕ್ರವರ್ತಿ ಸೂಲಿಬೆಲೆ ಅವರ ಪ್ರವೇಶಕ್ಕೆ ಜಿಲ್ಲಾಡಳಿತ ಹೇರಿದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ  ತೆರವುಗೊಳಿಸಿದೆ.

ಗುರುವಾರ ಸಂಜೆ 6 ಗಂಟೆಗೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿನಿಧಿಸುವ ಚಿತ್ತಾಪುರ  ಪಟ್ಟಣದ ಬಾಪುರಾವ್ ಪಾಟೀಲ್ ಕಲ್ಯಾಣ ಮಂಟಪದಲ್ಲಿ ನಮೋ ಭಾರತ್‌ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ನೀಡಿದ್ದ ಅನುಮತಿಯನ್ನು ರಾತ್ರೋರಾತ್ರಿ ಜಿಲ್ಲಾಡಳಿತ ರದ್ದು ಮಾಡಿ ಸೂಲಿಬೆಲೆ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.

https://twitter.com/astitvam/status/1763149909069603062?ref_src=twsrc%5Etfw%7Ctwcamp%5Etweetembed%7Ctwterm%5E1763149909069603062%7Ctwgr%5Ecf506e90c53e3bcfe2e996e0d601e09b8233760b%7Ctwcon%5Es1_&ref_url=https%3A%2F%2Fpublictv.in%2Fhigh-court-of-karnataka-kalaburagi-bench-grants-permission-to-chakravarthy-sulibele-to-attend-chittapur-namo-bharat-progrm%2F

ಸೂಲಿಬೆಲೆ ಜಿಲ್ಲೆ ಪ್ರವೇಶಿಸಿದರೆ ಶಾಂತಿ ಕದಡುತ್ತಾರೆ ಹಾಗೂ ಕಾನೂನು ವ್ಯವಸ್ಥೆ ಹಾಳಾಗಬಹುದು ಎಂಬ ನಿಟ್ಟಿನಲ್ಲಿ ಕಲಬುರಗಿ ಸಹಾಯಕ ಆಯುಕ್ತರು ಫೆ.‌29 ರಿಂದ ಮಾರ್ಚ್‌ 4ರವರೆಗೆ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರು.

ಅವರ ಕ್ಷೇತ್ರದಲ್ಲಿ ಪ್ರಧಾನಿ  ಸಾಧನೆ ಬಗ್ಗೆ ಮಾತಾಡೋದನ್ನು ಅವರಿಂದ ಸಹಿಸೋಕೆ ಆಗುತ್ತಿಲ್ಲ : ಪ್ರಿಯಾಂಕ್ ಖರ್ಗೆ ವಿರುದ್ಧ ಸೂಲಿಬೆಲೆ ಆಕ್ರೋಶ – Vishwanews24

ಜಿಲ್ಲಾಡಳಿತದ ಆದೇಶವನ್ನ ಪ್ರಶ್ನಿಸಿ ನಮೋ ಬ್ರಿಗೇಡ್ ಮತ್ತು ಬಿಜೆಪಿ ಹೈಕೋರ್ಟ್ ಮೊರೆ ಹೋಗಿತ್ತು ಅರ್ಜಿಯನ್ನು ಮಾನ್ಯ ಮಾಡಿದ ನ್ಯಾ. ಶ್ರೀಶಾನಂದ ಅವರಿದ್ದ ಪೀಠ, ಈ ಹಿಂದೆ ಕಾರ್ಯಕ್ರಮ ನಡೆಸಲು ಪೊಲೀಸರು ನೀಡಿದ್ದ ಅನುಮತಿಯನ್ನು ನೀಡಬೇಕು. ಪೊಲೀಸರು ನೀಡಿದ್ದ ನಿಯಮಾವಳಿಗೆ ಅನುಗುಣವಾಗಿ ಕಾರ್ಯಕ್ರಮ ಆಯೋಜಿಸಬೇಕು. ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರುವುದು ಸರಿಯಲ್ಲ ಎಂದು ಹೇಳಿ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ತೆರವು ಮಾಡಿತು.

ಕೋರ್ಟ್‌ ತೀರ್ಪು ಬಂದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಸೂಲಿಬೆಲೆ, ಅಂಬೇಡ್ಕರ್‌ ನೀಡಿದ ಸಂವಿಧಾನದಿಂದ ಧೈರ್ಯವಾಗಿ ಪ್ರಶ್ನೆ ಮಾಡಿ ನಾವು ಕಾರ್ಯಕ್ರಮಕ್ಕೆ ಅನುಮತಿ ಪಡೆದಿದ್ದೇವೆ. ದೇಶ ಭಕ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ತಾಪುರಕ್ಕೆ ಬರಬೇಕು ಎಂದು ಅವರು ಮನವಿ ಮಾಡಿದರು.

ಪುತ್ತಿಲ ಸ್ಪರ್ಧೆ : ಬಿಜೆಪಿಗೆ ಯಾವುದೇ ಎದುರಾಳಿಯಿಲ್ಲ ; ಈ ಬಾರಿ ಅತ್ಯಂತ ಹೆಚ್ಚು ಅಂತರದಿಂದ ಗೆಲುವು ಸಾಧಿಸುತ್ತೇನೆಂದ ನಳಿನ್ – Vishwanews24

Leave a Reply