ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಮುನ್ನಡೆ -Vishwanews24
ಕಲುಬುರ್ಗಿ: ಇಂದು ಲೋಕಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆಯು ಕ್ಷಣ ಕ್ಷಣಕ್ಕೂ ಕುತೂಹಲ ಮುಡಿಸುತ್ತಿದೆ. , ಗುಲ್ಬರ್ಗಾ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಉಮೇಶ್ ಜಾಧವ್ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.
ಈಗಾಗಲೇ ಮತ ಎಣಿಕೆ ಆರಂಭವಾಗಿದೆ. ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರಿಗೆ 8 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.
ಮಲ್ಲಿಕಾರ್ಜುನ್ ಖರ್ಗೆಗೆ ಕಠಿಣ ಪೈಪೋಟಿ ನೀಡುವ ಏಕೈಕ ಅಭ್ಯರ್ಥಿ ಉಮೇಶ್ ಜಾಧವ್ ಎಂಬುದನ್ನು ಅರಿತ ಬಿಜೆಪಿ, ಆಪರೇಷನ್ ಮಾಡಿ ಜಾಧವ್ ರನ್ನು ಕಣಕ್ಕಿಳಿಸಿತ್ತು. ಲೋಕಸಭಾ ಚುನಾವಣೆಯ ಪ್ರಚಾರವನ್ನು ಪ್ರಧಾನಿ ಮೋದಿ ಆರಂಭಿಸಿದ್ದು ಕಲ್ಬುರ್ಗಿಯಿಂದ. ಹಾಗಾಗಿ ಈ ಚುನಾವಣಾ ಕಣ ಭಾರೀ ಕುತೂಹಲ ಹುಟ್ಟಿಸಿದೆ.
