ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ -vishwanews24
ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ
ಹೊಸದಿಲ್ಲಿ: ಉಜಿರೆ ಸಮೀಪದ ಧರ್ಮಸ್ಥಳ ಗ್ರಾಮದ ಯುವತಿ ಸೌಜನ್ಯಾಳ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಕರ್ನಾಟಕ ಸರ ಕಾರದಿಂದ ರಚನೆಗೊಳ್ಳುವ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ಮರುತನಿಖೆಯಾಗಬೇಕು. ತನಿಖೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಿ, ತನಗೆ ಸಲ್ಲಿಸಬೇಕೆಂದು ನ್ಯಾ| ಸಂಜಯ್ ಕುಮಾರ್ಮತ್ತು ನ್ಯಾ| ಸಂಜೀವ್ ಸಚ್ದೇವ್ ಅವರಿದ್ದ ನ್ಯಾಯಪೀಠ ಹೇಳಿದೆ.
ಸರ್ವೋಚ್ಚ ನ್ಯಾಯಾಲಯವು ಸೌಜನ್ಯಾ ಪ್ರಕರಣವನ್ನು ಮರು ತನಿಖೆಗೆ ಒಪ್ಪಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಕಚೇರಿಯ ವ್ಯವಸ್ಥಾಪಕ ಪಾರ್ಶ್ವನಾಥ್ ಜೈನ್ ತಿಳಿಸಿದ್ದಾರೆ.
ಇದೇ ವಿಷಯಕ್ಕೆ ಸಂಬಂಧಿಸಿ ಹಲವು ವರ್ಷಗಳಿಂದ ಶ್ರೀ ಕ್ಷೇತ್ರದ ಮೇಲೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕಳಂಕ ತರುವ ಪ್ರಯತ್ನಗಳನ್ನು ಮಾಡುತ್ತಿವೆ. ಸೌಜನ್ಯಾಳಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ. ಈಗ ಆದೇಶಿಸಲಾಗಿರುವ ಮರು ತನಿಖೆಯು ಸಂಪೂರ್ಣ ನಿಷ್ಪಕ್ಷ ಹಾಗೂ ಪಾರದರ್ಶಕವಾಗಿ ನಡೆಯಲಿ ಮತ್ತು ಈ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಎಂದು ಆಶಿಸುತ್ತೇವೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
