ಸೌಜನ್ಯಾ ಪ್ರಕರಣ : ಮರು ತನಿಖೆಗೆ ಆದೇಶಿಸುವಂತೆ ಸರ್ಕಾರ, ಸಿಬಿಐಗೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌  – Vishwanews24

Featured, ರಾಜ್ಯ ನ್ಯೂಸ್

ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕುರಿತು ಮರು ತನಿಖೆ..

ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಜಾರಿ..

ಸಂತೋಷ್‌ರಾವ್‌ ಸಹ ಪ್ರಕರಣದಲ್ಲಿ ಪ್ರತಿವಾದಿ..

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕುರಿತು ಮರು ತನಿಖೆಗೆ ಆದೇಶಿಸುವಂತೆ ಕೋರಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.
ಮೃತಳ ಸಂಬಂಧಿ ಚಂದಪ್ಪಗೌಡ ಸಲ್ಲಿಸಿದ್ದ ತಕರಾರು ಅರ್ಜಿ ಕುರಿತು ನ್ಯಾಯಮೂರ್ತಿ ಕೆ.ನಟರಾಜನ್‌ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿತು.

ಉಡುಪಿ: 10 ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಕಟ್ಟಡ ನಿರ್ಮಾಣ ಮಾಲೀಕರಿಗೆ ಪ್ರಮಾಣ ಪತ್ರ ಕಡ್ಡಾಯ – Vishwanews24

ಅಲ್ಲದೆ, ಪ್ರಕರಣದಿಂದ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು.

ಸಂತೋಷ್‌ರಾವ್‌ ಸಹ ಪ್ರಕರಣದಲ್ಲಿ ಪ್ರತಿವಾದಿ
ಅದನ್ನು ಪರಿಗಣಿಸಿರುವ ನ್ಯಾಯಪೀಠ, ರೋಸ್ಟರ್‌ ಪ್ರಕಾರ ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿದೆ. ಪ್ರಕರಣದಿಂದ ಖುಲಾಸೆಯಾಗಿರುವ ಸಂತೋಷ್‌ರಾವ್‌ ಅವರನ್ನು ಸಹ ಪ್ರಕರಣದಲ್ಲಿ ಪ್ರತಿವಾದಿ ಮಾಡಲಾಗಿದೆ.

ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿ.ಎಚ್. ಪ್ರತಾಪ್ ರೆಡ್ಡಿ ರಾಜೀನಾಮೆ ಅಂಗೀಕರಿಸಿದ ರಾಜ್ಯ ಸರ್ಕಾರ – Vishwanews24

Leave a Reply