ಸ್ಟಿಂಗ್ ಆಪರೇಷನ್ ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆ : ಕೇಂದ್ರ ಸಚಿವ ಶೋಭಾ ಕರಂದ್ಲಾಜೆ – vishwanews24
ಸ್ಟಿಂಗ್ ಆಪರೇಷನ್ ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆ : ಕೇಂದ್ರ ಸಚಿವ ಶೋಭಾ ಕರಂದ್ಲಾಜೆ
ಮೈಸೂರು : ಸ್ಟಿಂಗ್ ಆಪರೇಷನ್ ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬ್ಲ್ಯಾಕ್ಮೇಲ್ ಸರಕಾರ ಇದೆ. ಅವರ ಪಾರ್ಟಿ ಒಳಗಡೆನೇ ಸರಕಾರದ ಒಳಗೆ ಬ್ಲ್ಯಾಕ್ಮೇಲ್ ಮಾಡಿಕೊಂಡು ಆಡಳಿತ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಅವರನ್ನು ಬ್ಲ್ಯಾಕ್ ಮೇಲ್ ಮಾಡಿ ರಾಜೀನಾಮೆ ಕೊಡಿಸಿದ್ದಾರೆ ಎನ್ನುವ ಸುದ್ದಿ ಓಡಾಡುತ್ತಿದೆ. ಅಧಿಕಾರ ಪಡೆಯಲಿಕ್ಕೆ ಯಾರಿಗೋ ಬ್ಲ್ಯಾಕ್ಮೇಲ್ ಮಾಡುತ್ತಾರೆ. ಸ್ಟಿಂಗ್ ಮಾಡ್ತಾರೆ, ದುರುಪಯೋಗ ಮಾಡುತ್ತಿದ್ದಾರೆ. ಸಿಡಿ ಇಟ್ಟುಕೊಂಡು ಕೆಲವರಿಗೆ ಬೆದರಿಸುತ್ತಿದ್ದಾರೆ ಎಂದು ತಿಳಿಸಿದರು.
ಮಂಗಳೂರು ದಸರಾ ಮೆರವಣಿಗೆ: ಅ. 21ರಂದು ವಾಹನ ಸಂಚಾರ ಮಾರ್ಗ ಬದಲಾವಣೆ – vishwanews24
