ಸ್ಯಾಂಡಲ್ ವುಡ್ ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ವಿಧಿವಶ -Vishwanews24

Featured, ರಾಜ್ಯ ನ್ಯೂಸ್

ಸ್ಯಾಂಡಲ್ ವುಡ್ ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ವಿಧಿವಶ -Vishwanews24

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ (60) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸಿದ್ದರಾಜ್ ಯಾರೇ ನೀ ಅಭಿಮಾನಿ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ್ದು, ಶ್ರೀಮಂಜುನಾಥ, ಸೂಪರ್, ಬುದ್ಧಿವಂತ ಸೇರಿದಂತೆ ಸುಮಾರು 75 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಮೂಲತಃ ಹುಬ್ಬಳ್ಳಿಯವರಾದ ಸಿದ್ದರಾಜ್ ನಾಟಕಗಳಿಂದ ಪ್ರಸಿದ್ಧಿ ಪಡೆದಿದ್ದು, ಅನೇಕ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದರು.

ನಿನ್ನೆಯಷ್ಟೇ 60 ನೇ ಜನ್ಮದಿನವನ್ನು ಪ್ರೇಮಲೋಕ ಧಾರವಾಹಿ ಸೆಟ್ ನಲ್ಲಿ ಆಚರಿಸಿಕೊಂಡಿದ್ದ ಅವರು, ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.