ಸ್ಯಾಂಡಲ್‌ವುಡ್ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ ನಿಧನ – Vishwanews24
ಸ್ಯಾಂಡಲ್‌ವುಡ್ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ ನಿಧನ
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ (45) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಟಪೋರಿ ಸತ್ಯ ಅವರು ನಂದ ಲವ್ಸ್ ನಂದಿತಾ ಸಿನಿಮಾ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೇ ‘ಮೇಳ’ ಎನ್ನುವ ಸಿನಿಮಾವನ್ನು ನಿರ್ದೇಶನ ಮಾಡಿದ್ದರು.
ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಟಪೋರಿ ಸತ್ಯ ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಟಪೋರಿ ಸತ್ಯ ಅವರು ಮನೆಗೆ ಆಧಾರವಾಗಿದ್ದು, ಪತ್ನಿ, ಮೂವರು ಹೆಣ್ಣುಮಕ್ಕಳನ್ನ ಅಗಲಿದ್ದಾರೆ.
ಬ್ರಹ್ಮಾವರ : ಮರುವಾಯಿ (ಕಪ್ಪೆಚಿಪ್ಪು) ಹೆಕ್ಕಲು ಹೋಗಿ ನಾಲ್ವರು ಯುವಕರು ನೀರು ಪಾಲು – Vishwanews24
