ಸ್ಯಾಂಡಲ್‍ವುಡ್‍ನ ಹಿರಿಯ ಕಲಾವಿದೆ ಭಾರ್ಗವಿ ನಾರಾಯಣ್ ನಿಧನ -Vishwanews24

Featured, ರಾಜ್ಯ ನ್ಯೂಸ್

ಸ್ಯಾಂಡಲ್‍ವುಡ್‍ನ ಹಿರಿಯ ಕಲಾವಿದೆ ಭಾರ್ಗವಿ ನಾರಾಯಣ್ ನಿಧನ -Vishwanews24

ಬೆಂಗಳೂರು: ಸ್ಯಾಂಡಲ್‍ವುಡ್‍ನ ಹಿರಿಯ ಕಲಾವಿದೆ ಭಾರ್ಗವಿ ನಾರಾಯಣ್ ಅವರು ನಿಧನರಾಗಿದ್ದಾರೆ.

ಭಾರ್ಗವಿ ನಾರಾಯಣ್ (84) ಅವರು ಸೋಮವಾರ ಸಂಜೆ 7:30ಕ್ಕೆ ಕೊನೆಯುಸಿರೆಳೆದಿದ್ದಾರೆ. ಭಾರ್ಗವಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಸಿನಿಮಾ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಭಾರ್ಗವಿ ನಾರಾಯಣ್ ಅವರು ಸಹಜ ಅಭಿನಯದಿಂದ ಗುರುತಿಸಿಕೊಂಡವರು. ಅವರ ಸಾವಿನ ಕುರಿತು ಅವರ ಮೊಮ್ಮಗಳು, ನಟಿ ಸಂಯುಕ್ತಾ ಹೊರನಾಡು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಎರಡು ಕನಸು, ಹಂತಕರ ಸಂಚು, ಪಲ್ಲವಿ ಅನುಪಲ್ಲವಿ, ಬಾ ನಲ್ಲೆ ಮಧುಚಂದ್ರಕೆ, ವಂಶವೃಕ್ಷ, ಪ್ರೋಫೆಸರ್ ಹುಚ್ಚುರಾಯ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. 2019ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಭಾರ್ಗವಿ ಅವರು 600ಕ್ಕೂ ಹೆಚ್ಚು ನಾಟಕಗಳ ಪ್ರದರ್ಶನ ನೀಡಿದ್ದಾರೆ.

Leave a Reply