ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣ : ನಟಿ ಸಂಜನಾ ಗಲ್ರಾನಿ ಸಿಸಿಬಿ ವಶಕ್ಕೆ -Vishwanews24

Featured, ರಾಜ್ಯ ನ್ಯೂಸ್

ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣ : ನಟಿ ಸಂಜನಾ ಗಲ್ರಾನಿ ಸಿಸಿಬಿ ವಶಕ್ಕೆ -Vishwanews24

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಬೆನ್ನಲ್ಲೇ ಇದೀಗ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಗಲ್ರಾನಿಯನ್ನು ಬಂಧಿಸಿದ್ದಾರೆ.

ಸದ್ಯ ಪೊಲೀಸರು ಸಂಜನಾರನ್ನು ಸಿಸಿಬಿ ಕಚೇರಿಯತ್ತ ಕರೆದೊಯ್ಯುತ್ತಿದ್ದಾರೆ. ಆಪ್ತ ರಾಹುಲ್ ಹೇಳಿಕೆ ಆಧರಿಸಿ ಸಿಸಿಬಿ ಅಧಿಕಾರಿಗಳು ನಟಿಯನ್ನು ಬಂಧಿಸಿದ್ದಾರೆ.

ನಟಿ ಆಪ್ತ ರಾಹುಲ್ ಹೇಳಿಕೆಯಿಂದಾಗಿ ಇಂದು ಬೆಳಗ್ಗೆ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಮನೆ ಮೇಲೆ ದಾಳಿ ಮಾಡಿದ್ದರು. ಸತತ 4 ಗಂಟೆಗಳ ತಲಾಶ್ ಬಳಿಕ ಇದೀಗ ನಟಿಯನ್ನು ಅಧಿಕಾರಿಗಳು ಸಿಸಿಬಿ ಕಚೇರಿಗೆ ಕರೆದುಕೊಂಡು ಹೋಗುತ್ತಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ಇಂದಿರಾನಗರದಲ್ಲಿರುವ ನಟಿ ಸಂಜನಾ ನಿವಾಸದ ಮೇಲೆ ಇನ್ಸ್ ಪೆಕ್ಟರ್ ಪುನೀತ್ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸಿ, ಸಂಜನಾ ಮೊಬೈಲ್ ಮತ್ತು ಪರ್ಸ್‍ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.