ಹಕ್ಕಿಜ್ವರದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ : ಸಚಿವ ದಿನೇಶ್ ಗುಂಡೂರಾವ್- vishwanews24
ಹಕ್ಕಿಜ್ವರ : ಅನಗತ್ಯ ಆತಂಕ ಬೇಡ, ಎಚ್ಚರಿಕೆ ವಹಿಸಿ : ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು : ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಮಾಹಿತಿ ನೀಡಿದ್ದು, ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದೆ. ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದೆ.#ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ.
ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ…
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 5, 2025
ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.
ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಪ್ರಿಯಕರ – vishwanews24
