ಹಲಾಲ್ ಬಜೆಟ್ ಎಂಬ ಟೀಕೆ – ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ : ಸಿದ್ದರಾಮಯ್ಯ – vishwanews24
ಹಲಾಲ್ ಬಜೆಟ್ ಎಂಬ ಟೀಕೆ : ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ : ಸಿದ್ದರಾಮಯ್ಯ
ಬೆಂಗಳೂರು: 2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿಯಾಗಿದ್ದು, ಮೊದಲ ಬಾರಿಗೆ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು 2025-26 ನೇ ಸಾಲಿನ ಆಯವ್ಯಯ ಕುರಿತಂತೆ ಇಂದು ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಗ್ಯಾರಂಟಿಗಳನ್ನು ಮದ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಫಲಾನುಭವಿಗಳಿಗೆ ಡಿಬಿಟಿ ಮಾಡಲಾಗುತ್ತಿದ್ದು, ಸಾರ್ವತ್ರಿಕ ಮೂಲ ಆದಾಯ ತತ್ವದ ಆಧಾರದ ಮೇಲೆ ರೂಪಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 232 ಕೋಟಿಗಳು ವೆಚ್ಚವಾಗುತ್ತಿದೆ. ಜನರಿಗೆ ಆರ್ಥಿಕ ಬಲ ತುಂಬಿದರೆ, ಅವರ ಖರೀದಿ ಶಕ್ತಿಯೂ ಹೆಚ್ಚಿ, ರಾಜ್ಯದ ಆರ್ಥಿಕತೆಯೂ ಬೆಳೆಯುತ್ತದೆ. ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ , ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ. ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದರು.
