ಹಾಸನ ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ ; ಮೇರಿ ಫ್ರಾನ್ಸಿಸ್‌ ಅಧಿಕಾರ ಸ್ವೀಕಾರ – Vishwanews24

Featured, ರಾಜ್ಯ ನ್ಯೂಸ್

ಹಾಸನ: ಹಾಸನ ಜಿಲ್ಲಾಧಿಕಾರಿ ಅಕ್ರಂ ಪಾಷ ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ ಡಿಸಿಯಾಗಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅಧಿಕಾರ ಸ್ವೀಕರಿಸಿದ್ದಾರೆ.

ಫೆಬ್ರುವರಿ 22ರಂದು ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ಆ ಸ್ಥಾನಕ್ಕೆ ಪಾಷ ಅವರನ್ನು ನಿಯೋಜಿಸಲಾಗಿತ್ತು.

ಬಿಜೆಪಿ ಶಾಸಕ ಪ್ರೀತಂಗೌಡ ಚುನಾವಣಾ ಆಯೋಗಕ್ಕೆ ದೂರು ನೀಡಿ ಡಿಸಿ ಅವರನ್ನು ಬದಲಾವಣೆ ಮಾಡುವಂತೆ ಮನವಿ ಮಾಡಿದ್ದರು. ಈ ದೂರನ್ನು ಆಯೋಗ ಗಂಭೀರವಾಗಿ ಪರಿಗಣಿಸಿ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದೆ.

ನೂತನ ಜಿಲ್ಲಾಧಿಕಾರಿಯಾಗಿ ನೇಮಕವಾಗಿರುವ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಬೆಂಗಳೂರು ಪ್ರವಾಸೋದ್ಯಮ ಇಲಾಖೆಯಲ್ಲಿ ನಿರ್ದೇಶಕರಾಗಿ ಪ್ರಿಯಾಂಕಾ ಮೇರಿ ಕಾರ್ಯನಿರ್ವಹಿಸಿದ್ದರು.