ಹಾಸನ: ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳ ಬಂಧನ – vishwanews24

Featured, ರಾಜ್ಯ ನ್ಯೂಸ್

ಹಾಸನ: ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳ ಬಂಧನ

ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಹಾಸನ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಡಿಸಿಆರ್‌ಬಿ  ಪೊಲೀಸರು ಬಂಧಿಸಿದ್ದಾರೆ.

ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಬಂಧಿತರು. ಹಾಸನ  ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ, ನಾಲ್ಕನೇ ಅಡ್ಡ ರಸ್ತೆಯ ಜುಬೇರ್ ಎಂಬವನ ಮನೆಯಲ್ಲಿ ಈ ಮೂವರು ವಾಸವಿದ್ದರು. ಜುಬೇರ್ ಮನೆಯ ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದರು. ಈ ಮೂವರು ಪಶ್ಚಿಮ ಬಂಗಾಳದ ವಿಳಾಸವಿರುವ ನಕಲಿ ಆಧಾರ್‌ಕಾರ್ಡ್ ಹೊಂದಿದ್ದರು.

ನುಸುಳುಕೋರರನ್ನು ಡಿಸಿಆರ್‌ಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಪ್ರಕರಣ ; ಶಿಲ್ಪಿ ಕೃಷ್ಣ ನಾಯಕ್ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ – vishwanews24

Leave a Reply