ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಜೆ. ಪಿ. ನಡ್ಡಾ ರವರಿಗೆ ಸನ್ಮಾನ – Vishwanews24

Featured, ಉಡುಪಿ

ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಜೆ. ಪಿ. ನಡ್ಡಾ ರವರಿಗೆ ಸನ್ಮಾನ

ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ. ಪಿ. ನಡ್ಡಾ ರವರನ್ನು ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಲಕ್ಷ್ಮಣ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಬೆಳ್ಳಿ ದೋಣಿಯ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ ಕೈಗೊಂಡ ಯೋಜನೆ ಹಾಗೂ ಹಿಂದುಳಿದ ವರ್ಗಗಳನ್ನು ಸಮಾಜದ ಮುಖ್ಯ ವಾಹಿನಿಗೆ ಬರಲು ಅವಕಾಶ ಕಲ್ಪಿಸಿದ ಪಕ್ಷದ ನಿಲುವುಗಳನ್ನು ಸ್ವಾಗತಿಸಿ ರಾಷ್ಟ್ರೀಯ ಅಧ್ಯಕ್ಷರಿಗೆ ಸನ್ಮಾನಿಸಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್ ಸಿಂಗ್, ಶ್ರೀ ಸಿ ಟಿ ರವಿ, ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಅಧ್ಯಕ್ಷರಾಗಿ ಅನಿಲ್ ಲೋಬೊ ಆಯ್ಕೆ – Vishwanews24

Leave a Reply