ಹಿಜಾಬ್ ಕಾರಣಕ್ಕೆ ಪರೀಕ್ಷೆ ತಪ್ಪಿಸಿಕೊಂಡರೆ ಮರು ಪರೀಕ್ಷೆ ಬರೆಯಲು ಅವಕಾಶವಿಲ್ಲ : ಮಾಧುಸ್ವಾಮಿ – Vishwanews24

Featured, ರಾಜ್ಯ ನ್ಯೂಸ್

ಮರು ಪರೀಕ್ಷೆಗೆ ಅವಕಾಶ ಕೊಟ್ಟರೆ ಅದು ಬೇರೆ ರೀತಿ ಸಂದೇಶ ರವಾನೆಯಾಗುತ್ತದೆ..

ಬೆಂಗಳೂರು : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯದಿದ್ದರೆ ಅವರಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸಚಿವ ಜೆ. ಮಾಧುಸ್ವಾಮಿ ಹೇಳಿದ್ದಾರೆ.

ಈ ಕುರಿತು ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ರಘುಪತಿ ಭಟ್, ಹಿಜಾಬ್ ಸಂಘರ್ಷದ ವೇಳೆ ಪರೀಕ್ಷೆಯಿಂದ ವಂಚಿತರಾದವರಿಗೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ಕೊಡಬೇಕು. ಅನಗತ್ಯ ವಿವಾದ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಾಧುಸ್ವಾಮಿ, ಹಿಜಾಬ್ ಕಾರಣಕ್ಕೆ ಪರೀಕ್ಷೆ ತಪ್ಪಿಸಿಕೊಂಡರೆ ಮರು ಪರೀಕ್ಷೆ ಬರೆಯಲು ಅವಕಾಶವಿಲ್ಲ. ಕೋರ್ಟ್ ಮಧ್ಯಂತರ ಆದೇಶದ ಬಳಿಕವೂ ಪರೀಕ್ಷೆ ತಪ್ಪಿಸಿಕೊಂಡರೆ ಅಂತಹ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ಇನ್ನು ನಾವು ಒಂದು ವ್ಯವಸ್ಥೆಯಲ್ಲಿದ್ದೇವೆ. ಈಗ ಮರು ಪರೀಕ್ಷೆಗೆ ಅವಕಾಶ ಕೊಟ್ಟರೆ ಅದು ಬೇರೆ ರೀತಿ ಸಂದೇಶ ರವಾನೆಯಾಗುತ್ತದೆ ಎಂದು ಹೇಳಿದ್ದಾರೆ.

ಬಂದ್, ಪ್ರತಿಭಟನೆ ಅವರ ಹಕ್ಕು, ಶಾಂತಿಯುತವಾಗಿ ಮಾಡಿಕೊಳ್ಳಲಿ : ಸಿದ್ದರಾಮಯ್ಯ – Vishwanews24

Leave a Reply