ಹಿಜಾಬ್‌ ಕುರಿತು ವಿಭಜಿತ ತೀರ್ಪು: ಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ : ಪೊಲೀಸ್‌ ವರಿಷ್ಟಾಧಿಕಾರಿ ಅಕ್ಷಯ್‌ ಮಚ್ಚಿಂದ್ರ ಎಚ್ಚರಿಕೆ – Vishwanews24

Featured, ಉಡುಪಿ

ಹಿಜಾಬ್‌ ಕುರಿತು ವಿಭಜಿತ ತೀರ್ಪು: ಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ : ಪೊಲೀಸ್‌ ವರಿಷ್ಟಾಧಿಕಾರಿ ಅಕ್ಷಯ್‌ ಮಚ್ಚಿಂದ್ರ ಎಚ್ಚರಿಕೆ

ಉಡುಪಿ : ಹಿಜಾಬ್ ವಿವಾದದ ಕುರಿತು ನ್ಯಾಯಮೂರ್ತಿಗಳ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಹಿಜಾಬ್ ವಿವಾದವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್ ವಹಿಸಲಾಗಿದೆ

ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿ ಪೊಲೀಸ್‌ ಭದ್ರತೆ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಈಗಾಗಲೇ ಸೂಚನೆ ನೀಡಲಾಗಿದೆ. ವದಂತಿ ಹರಡುವವರ ವಿರುದ್ಧ ಕ್ರಮಕ್ಕೆ ಎಚ್ಚರಿಕೆ ನೀಡಲಾಗಿದೆ. ಎಂದು ಉಡುಪಿ ಪೊಲೀಸ್‌ ವರಿಷ್ಟಾಧಿಕಾರಿ ಅಕ್ಷಯ್‌ ಮಚ್ಚಿಂದ್ರ ಮಾಹಿತಿ ನೀಡಿದ್ದಾರೆ.

ಉಡುಪಿ: ಹಿಜಾಬ್ ಪ್ರಕರಣ : ದ್ವಿ ಸದಸ್ಯ ಪೀಠಕ್ಕೆ ನಾವು ಗೌರವ ಸಲ್ಲಿಸುತ್ತೇವೆ..ಫಿಫ್ಟಿ ಫಿಫ್ಟಿ ತೀರ್ಪು ಬರಬಹುದು ಎಂಬ ನಿರೀಕ್ಷೆ ಮೊದಲೇ ಇತ್ತು : ಹುಸೇನ್ ಕೋಡಿಬೆಂಗ್ರೆ – Vishwanews24

ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ವಿಭಿನ್ನ ಅಭಿಪ್ರಾಯದ ಹಿನ್ನೆಲೆಯಲ್ಲಿ ಹಿಜಾಬ್ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿದೆ.

ಹೇಮಂತ್ ಗುಪ್ತಾ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಿದ್ದಾರೆ. ನ್ಯಾಯಮೂರ್ತಿ ಸುಧಾಂಶ ಧುಲಿಯಾ ಅವರು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ರದ್ದುಗೊಳಿಸಿದ್ದಾರೆ. ಹಿಜಾಬ್ ವಿವಾದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆಗೊಳಿಸಲಾಗಿದೆ.

Leave a Reply