ಹಿಜಾಬ್ ಧರಿಸಿದವರಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶವಿಲ್ಲ; ಬಿ.ಸಿ ನಾಗೇಶ್ – Vishwanews24

Featured, ರಾಜ್ಯ ನ್ಯೂಸ್

ಹಿಜಾಬ್ ಧರಿಸಿದವರಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶವಿಲ್ಲ; ಬಿ.ಸಿ ನಾಗೇಶ್

ಬೆಂಗಳೂರು: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯುವುದಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ವೇಳೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ನಿಯಮವನ್ನು ಪಾಲನೆ ಮಾಡಬೇಕು.ಹಿಜಾಬ್ ಧರಿಸಿಕೊಂಡು ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಹಿಜಾಬ್ ವಿವಾದದ ನಡುವೆ ಎಸ್‌ಎಸ್‌ಎಲ್ ಸಿ (10 ನೇ ತರಗತಿ) ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಇದೀಗ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಏಪ್ರಿಲ್ 22 ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ಪ್ರಕಟಣೆ ತಿಳಿಸಿದೆ.

 

Leave a Reply